ನವದೆಹಲಿ: ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಯಲ್ಲಿ ಸ್ಥಳಿಯರು ಮತ್ತು ರೈತರ ನಡುವೆ ಶುಕ್ರವಾರ ನಡೆದ ಘರ್ಷಣೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಖಡ್ಗದಿಂದ ಹಲ್ಲೆ ಮಾಡಿದ ವ್ಯಕ್ತಿ ಸೇರಿದಂತೆ 44 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ತಿಂಗಳುಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯು ಈಗ ಘರ್ಷಣೆಯ ಕೇಂದ್ರಬಿಂದುವಾಗಿದೆ. ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ಗಾಜಿಪುರದಲ್ಲಿ, ಸಾವಿರಾರು ಪ್ರತಿಭಟನಾಕಾರರು ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಕುಳಿತಿದ್ದಾರೆ. ಈ ಪ್ರದೇಶವನ್ನು ಖಾಲಿ ಮಾಡುವಂತೆ ಗಾಜಿಯಾಬಾದ್ ಆಡಳಿತದ ನೀಡಿದ ಗಡುವನ್ನು ಪ್ರತಿಭಟನಾಕಾರರು ಧಿಕ್ಕರಿಸಿದ್ದಾರೆ.
ಗುರುವಾರ ರೈತ ಮುಖಂಡ ಕಣ್ಣೀರಿನ ಮೂಲಕ ಮನವಿ ಮಾಡಿಕೊಂಡ ಬಳಿಕ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಗಮಿಸುತ್ತಿದ್ದಾರೆ. ಹಿಗಾಗಿ ಹೆಚ್ಚುವರಿ ಭದ್ರತಾ ಪಡೆಗಳನ್ನು ಕರೆಸಲಾಗಿದೆ.
ಭಾರೀ ಪೊಲೀಸ್ ಉಪಸ್ಥಿತಿಯ ಹೊರತಾಗಿಯೂ, ಸಿಂಘುನಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಭಾರೀ ಘರ್ಷಣೆ ಏರ್ಪಟ್ಟಿತ್ತು. ಪ್ರತಿಭಟನಾಕಾರರ ಶಿಬಿರಗಳನ್ನು ಸ್ಥಳಿಯರು ಧ್ವಂಸಗೊಳಿಸಿದ್ದಾರೆ. ಪೊಲೀಸರು ಅಶ್ರುವಾಯು ಪ್ರಯೋಗಿಸಿ ಜನರನ್ನು ನಿಯಂತ್ರಿಸಿದ್ದಾರೆ. ಇದೀಗ ಘಟನೆಗೆ ಸಂಬಂಧಿಸಿದಂತೆ 45 ಜನರನ್ನು ಬಂಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.