ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಕರ್ನಾಟಕ ಲೋಕಾಯುಕ್ತ (ಮೂರನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಮೋಟಾರು ವಾಹನ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ಸೇರಿದಂತೆ ಒಟ್ಟು 11 ವಿಧೇಯಕಗಳನ್ನು ಮಂಡನೆ ಮಾಡಲಾಗಿದೆ.
ಹಣಕಾಸು ಖಾತೆಗೆ ಸಂಬಂಧಿಸಿದಂತೆ 2020 ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ (ತಿದ್ದುಪಡಿ) ಮಸೂದೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಡಿಸಿದರು. ಜೊತೆಗೆ 2020 ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಮೂರನೇ ತಿದ್ದುಪಡಿ)ಯನ್ನು ಸಹ ಸಿಎಂ ಮಂಡನೆ ಮಾಡಿದ್ದಾರೆ.
ಜೊತೆಗೆ 2020 ನೇ ಸಾಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ ವಿಧೇಯಕ, ಕರ್ನಾಟಕ ಮೋಟಾರು ವಾಹನ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕಗಳನ್ನು ಮಂಡನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾಶಿಲ್ಪ ವಿವಿ ವಿಧೇಯಕ, ಏಟ್ರಿಯಾ ವಿವಿ ವಿಧೇಯಕ ಹಾಗೂ ಬೆಂಗಳೂರು ಡಾ. ಬಿ. ಆರ್. ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯದ (ತಿದ್ದುಪಡಿ) ವಿಧೇಯಕ ಮಸೂದೆಗಳನ್ನು ಅಂಗೀಕರಿಸಲಾಯಿತು. ಜೊತೆಗೆ 2020 ನೇ ಸಾಲಿನ ಕರ್ನಾಟಕ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, ಕರ್ನಾಟಕ ಪೌರಸಭೆಗಳ (ಎರಡನೇ ತಿದ್ದುಪಡಿ) ವಿಧೇಯಕ, ಭೂಮಿ ಮತ್ತು ಕಟ್ಟಡಗಳ ಮೇಲಿನ ತೆರಿಗೆ ಬದಲಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಪೌರಸಭೆಗಳ (ಎರಡನೇ ತಿದ್ದುಪಡಿ) ವಿಧೇಯಕ ಮೊದಲಾದವುಗಳನ್ನು ಒಳಗೊಂಡಂತೆ ಇನ್ನೂ ಕೆಲವು ಮಸೂದೆಗಳನ್ನು ಈ ಸಂದರ್ಭದಲ್ಲಿ ಮಂಡಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.