ಮಂಗಳೂರು: ನಗರದ ಹೊರವಲಯದಲ್ಲಿತುವ ಕಂಬಳಪದವು ಎಂಬಲ್ಲಿ ನಿರ್ಮಾಣವಾಗಿರುವ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಾರಿಗೆ ಇಲಾಖೆ 15 ಕೋಟಿ ರೂ ವೆಚ್ಚದಲ್ಲಿ ಈ ಕೆಂದ್ರವನ್ನು ನಿರ್ಮಾಣ ಮಾಡಿದೆ. ಚಾಲಕರಿಗೆ ಸೂಕ್ತ ಮತ್ತು ಸಮರ್ಪಕ ತರಬೇತಿ ದೊರೆತಲ್ಲಿ ಅಪಘಾತಗಳಂತಹ ಸಂಭಾವ್ಯ ಅನಾಹುತಗಳನ್ನು ತಡೆಯುವ ಸಾಮರ್ಥ್ಯ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ತರಬೇತಿ ಕೇಂದ್ರ ಮಹತ್ವ ಪಡೆಯಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಇದು ಮೂರನೇಯ ತರಬೇತಿ ಕೇಂದ್ರವಾಗಿದೆ. ನಾಲ್ಕನೇಯ ತರಬೇತಿ ಕೇಂದ್ರವನ್ನು ಗುಲ್ಬರ್ಗದಲ್ಲಿ ಶೀಘ್ರದಲ್ಲೇ ಆರಂಭ ಮಾಡಲಾಗುವುದು. ಹಾಗೆಯೇ ಮತ್ತೆ 4 ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಪ್ರಸ್ತುತ ಪ್ರಾರಂಭವಾಗಿರುವ ಕೇಂದ್ರದಲ್ಲಿ ಆಡಳಿತ ಕಚೇರಿ, ಕಾರ್ಯಾಗಾರ, ವಸತಿ ಗೃಹ ವ್ಯವಸ್ಥೆ ಇರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.