ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪೋಷಕರಿಗೆ ಹೊರೆಯಾಗುವುದನ್ನು ತಪ್ಪಿಸಲು ಖಾಸಗಿ ಶಾಲಾ ಶುಲ್ಕವನ್ನು 30% ಕಡಿತಗೊಳಿಸಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳು 70% ಗಳಷ್ಟು ಮಾತ್ರವೇ ಶುಲ್ಕ ಪಡೆಯಬೇಕು. ಈ ಶುಲ್ಕವನ್ನು 2 ಕಂತುಗಳಲ್ಲಿ ಪಾವತಿಸಲು ಪೋಷಕರಿಗೆ ಅವಕಾಶ ನೀಡಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಈ ಸಂಬಂಧ ನಿನ್ನೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದರು. ಖಾಸಗಿ ಶಾಲೆಗಳಲ್ಲಿ 30% ಶುಲ್ಕ ಕಡಿತ ಮಾಡಲಾಗಿದ್ದು, ವಾರ್ಷಿಕ ಶುಲ್ಕವನ್ನಷ್ಟೇ ಪಡೆಯಬಹುದಾಗಿದೆ ಎಂದು ಸಚಿವರು ನಿನ್ನೆ ನಡೆಸಿದ ಸಭೆಯಲ್ಲಿ ತಿಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.