ನವದೆಹಲಿ: ಭಾರತವು ಕೋವಿಡ್ -19 ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲು ಸಿದ್ಧರಾಗಿದ್ದಾರೆ. ಹಿನ್ನೆಲೆಯಲ್ಲಿ ಎಲ್ಲರ ಗಮನ ಅವರ ಮೇಲೆ ನೆಟ್ಟಿದೆ. ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವರ ಭಾಷಣದೊಂದಿಗೆ ಬಜೆಟ್ ಪ್ರಸ್ತುತಿ ಪ್ರಾರಂಭವಾಗಲಿದೆ.
ಈ ಸರ್ಕಾರದ ಮೂರನೇ ಬಜೆಟ್ ಮಂಡನೆಯ ಹಿನ್ನೆಲೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ತಂಡವು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿದ್ದು, ಅವರೊಂದಿಗೆ ಸಚಿವ ಅನುರಾಗ್ ಠಾಕೂರ್ ಮತ್ತು ಹಣಕಾಸು ಸಚಿವಾಲಯದ ಇತರ ಅಧಿಕಾರಿಗಳೂ ಇರಲಿದ್ದಾರೆ.
ಮಂಡನೆಗೆ ಮೊದಲು ಬೆಳಿಗ್ಗೆ 10: 15 ಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ನಡೆಸಲಿದೆ. ಸಾಮಾನ್ಯವಾಗಿ, ಮಂಡನೆ ಅವಧಿ 90 ರಿಂದ 120 ನಿಮಿಷಗಳವರೆಗೆ ಇರುತ್ತದೆ. ಈ ವರ್ಷ ಕೇಂದ್ರ ಬಜೆಟ್ ಅನ್ನು ಮೊದಲ ಬಾರಿಗೆ ಕಾಗದರಹಿತ ರೂಪದಲ್ಲಿ ಪ್ರಸ್ತುತ ಪಡಿಸಲಾಗುತ್ತಿದೆ.
ಹಣಕಾಸು ಸಚಿವರು ‘ಯೂನಿಯನ್ ಬಜೆಟ್ ಮೊಬೈಲ್ ಆಪ್’ ಅನ್ನು ಮಂಡನೆ ಗೊಳಿಸಿದ್ದು, ಬಜೆಟ್ ದಾಖಲೆಗಳ ಅಡೆತಡೆ ಇಲ್ಲದ ಪ್ರವೇಶಕ್ಕೆ ಇದು ಸಂಸತ್ ಸದಸ್ಯರಿಗೆ ಇದು ಅನುವು ಮಾಡಿಕೊಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.