ಬೆಂಗಳೂರು: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್ 2021, ಕೊರೋನಾ ಸವಾಲಿನ ವರ್ಷದಲ್ಲಿ ದೇಶದ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ. ಕೋವಿಡ್-19 ಬಿಕ್ಕಟ್ಟಿನಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಪುಟಿದೇಳಲು ಕೇಂದ್ರದ ಮೋದಿ ಸರ್ಕಾರದ ಈ ಬಜೆಟ್ ವೇಗವರ್ಧಕವಾಗಲಿದೆ. ಸಾಂಕ್ರಾಮಿಕದ ಸಂಕಷ್ಟಗಳ ನಡುವೆ ಇದು ಉತ್ತಮ ಬಜೆಟ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆಗೆ ಬಜೆಟ್ನಲ್ಲಿ ವಿಶೇಷ ಗಮನ ನೀಡಲಾಗಿರುವುದು ಸ್ವಾಗತಾರ್ಹ. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸಲು ಭೂಮಿಕೆಯನ್ನು ಈ ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಬಿಎಸ್ವೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ ನಲ್ಲಿ 13 ವಲಯಗಳಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮ ರೂಪಿಸಿರುವುದು, ಸ್ವಚ್ಛ ಅಭಿಯಾನಕ್ಕೆ 1.41 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದನ್ನು ಸ್ವಾಗತಿಸುತ್ತೇನೆ. ಪ್ರಸಕ್ತ ಬಜೆಟ್ ಅರ್ಥವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಶಕ್ತಿ ತುಂಬುವ ಸಾಮರ್ಥ್ಯ ಪ್ರದರ್ಶಿಸಿದೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ವಿತ್ತಸಚಿವೆ ಶ್ರೀಮತಿ @nsitharaman ರವರು ಇಂದು ಮಂಡಿಸಿದ #ಬಜೆಟ್2021 ಸವಾಲಿನ ವರ್ಷದಲ್ಲಿ ದೇಶದ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ. ಕೋವಿಡ್-19 ಬಿಕ್ಕಟ್ಟಿನಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಪುಟಿದೇಳಲು @narendramodi ಸರ್ಕಾರದ ಈ ಬಜೆಟ್ ವೇಗವರ್ಧಕವಾಗಲಿದೆ. ಸಾಂಕ್ರಾಮಿಕದ ಸಂಕಷ್ಟಗಳ ನಡುವೆ ಇದು ಉತ್ತಮ ಬಜೆಟ್
— B.S. Yediyurappa (@BSYBJP) February 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.