ನವದೆಹಲಿ: ಭಾರತದ “ಲಸಿಕೆ ಮೈತ್ರಿ” ಕಾರ್ಯಕ್ರಮವು ಮತ್ತಷ್ಟು ವೇಗವನ್ನು ಪಡೆಯುತ್ತಿದೆ, ಈಗ ಭಾರತ ನಿರ್ಮಿತ ಕೋವಿಡ್-19 ಲಸಿಕೆಗಳನ್ನು ದಕ್ಷಿಣ ಆಫ್ರಿಕಾ ಮತ್ತು ಅಲ್ಜೀರಿಯಾಕ್ಕೆ ತಲುಪಿಸಲಾತ್ತಿದೆ.
ಪ್ರಪಂಚದಾದ್ಯಂತ ಅತಿದೊಡ್ಡ ಲಸಿಕೆ ತಯಾರಿಸುವ ಸಾಮರ್ಥ್ಯವನ್ನು ಹೊಂದಿರುವ ರಾಷ್ಟ್ರವಾದ ಭಾರತದ ಬಳಿ ಅನೇಕ ರಾಷ್ಟ್ರಗಳು ಲಸಿಕೆಗಾಗಿ ಮನವಿಯನ್ನು ಮಾಡಿಕೊಂಡಿವೆ. ಸಾಂಕ್ರಾಮಿಕ ರೋಗದ ವಿರುದ್ಧ ಜನರನ್ನು ರಕ್ಷಿಸಲು ಬದ್ದತೆಯನ್ನು ತೊರಿಸಿರುವ ರಾಷ್ಟ್ರ ಲಸಿಕೆಗಳನ್ನು ಇತರ ದೇಶಗಳಿಗೆ ಸರಬರಾಜು ಮಾಡುತ್ತಿದೆ, ಭಾರತದ ಲಸಿಕೆ ಇಂದು ಜಗತ್ತಿನಾದ್ಯಂತ ಓಡಾಡುತ್ತಿದೆ ಮತ್ತು ಹಲವಾರು ಜೀವಗಳನ್ನು ಉಳಿಸಲು ಕಾರಣವಾಗಲಿದೆ.
ಭಾರತವು ತನ್ನ ನೆರೆಹೊರೆಯ ರಾಷ್ಟ್ರಗಳಿಂದ ಪ್ರಾರಂಭಿಸಿ ಜಗತ್ತಿನಾದ್ಯಂತದ ರಾಷ್ಟ್ರಗಳಿಗೆ ಲಸಿಕೆಗಳನ್ನು ಪೂರೈಸಿದೆ. ಭಾರತದಲ್ಲಿ ಲಸಿಕೆಗಳನ್ನು ಪಡೆದ ರಾಷ್ಟ್ರಗಳ ಗುಂಪಿನಲ್ಲಿ ಭೂತಾನ್, ಮಾಲ್ಡೀವ್ಸ್, ಬಾಂಗ್ಲಾದೇಶ, ಬ್ರೆಜಿಲ್ ಮತ್ತು ನೇಪಾಳ ಸೇರಿವೆ.
ಭಾರತವು ಇತರ ರಾಷ್ಟ್ರಗಳಿಗೆ ಲಸಿಕೆಗಳನ್ನು ಪೂರೈಸುತ್ತಿದ್ದು, ದೇಶದೊಳಗೂ ಅತೀದೊಡ್ಡ ಲಸಿಕಾ ಅಭಿಯಾನ ನಡೆಸುತ್ತಿದೆ. ಇದರ ಅಡಿಯಲ್ಲಿ ಎರಡು ಕೋವಿಡ್ -19 ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಅನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಂಚೂಣಿಯ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತಿದೆ.
ಇವುಗಳಲ್ಲಿ, ಕೋವಾಕ್ಸಿನ್ ಅನ್ನು ಭಾರತೀಯ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮತ್ತು ಪುಣೆ ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.