ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಇಸ್ರೇಲ್ ರಾಜತಾಂತ್ರಿಕರನ್ನು ರಕ್ಷಿಸಲು ಭಾರತ ಸರ್ಕಾರ ಕೈಗೊಂಡ ಪ್ರಯತ್ನಗಳಿಗಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು.
ಪ್ರಧಾನಿ ಮೋದಿ ಸೋಮವಾರ ನೆತನ್ಯಾಹು ಅವರಿಗೆ ಕರೆ ಮಾಡಿ, ಭಾರತದಲ್ಲಿರುವ ಇಸ್ರೇಲಿ ರಾಜತಾಂತ್ರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಭರವಸೆ ನೀಡಿದ್ದಾರೆ. ಇಸ್ರೇಲ್ ಪ್ರಧಾನ ಮಂತ್ರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಇದನ್ನು ದೃಢಪಡಿಸಿದೆ, “ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲಿನೊಂದಿಗೆ ಸಹಕಾರವನ್ನು ಮುಂದುವರಿಸಲಿದೆ” ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ ಎಂದು ಹೇಳಿದೆ.
ಜನವರಿ 29 ರಂದು ನವದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಮೋದಿ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲೂ ತಿಳಿಸಲಾಗಿದೆ.
ಇಸ್ರೇಲಿ ರಾಜತಾಂತ್ರಿಕರು ಮತ್ತು ಅವರಿರುವ ಆವರಣಗಳ ಸುರಕ್ಷತೆ ಮತ್ತು ಭದ್ರವು ಭಾರತವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಮತ್ತು ಅಪರಾಧಿಗಳನ್ನು ಹುಡುಕಲು ಮತ್ತು ಶಿಕ್ಷಿಸಲು ತನ್ನ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಳ್ಳಲಿದೆ ಎಂದು ಮೋದಿ ನೆತನ್ಯಾಹುಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಭಾರತೀಯ ಮತ್ತು ಇಸ್ರೇಲಿ ಭದ್ರತಾ ಸಂಸ್ಥೆಗಳ ನಡುವಿನ ನಿಕಟ ಹೊಂದಾಣಿಕೆಯ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು.
ಮೋದಿ ಮತ್ತು ನೆತನ್ಯಾಹು ಕೂಡ ಆಯಾ ದೇಶಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದ ಪ್ರಗತಿಯ ಬಗ್ಗೆ ಪರಸ್ಪರ ವಿವರಿಸಿದರು ಮತ್ತು ಹೇಳಿಕೆಯ ಪ್ರಕಾರ ಈ ವಿಷಯದಲ್ಲಿ ಮತ್ತಷ್ಟು ಸಹಯೋಗದ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.