ಹೈದರಾಬಾದ್: ಶುಕ್ರವಾರ ಮಧ್ಯರಾತ್ರಿ ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಸಿಮಿ ಉಗ್ರ ಸಂಘಟನೆಯ ಕಾರ್ಯಕರ್ತರು ಎನ್ನಲಾದ ಇಬ್ಬರು ಗ್ಯಾಂಗ್ಸ್ಟರ್ಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೃತರನ್ನು ಮೊಹಮ್ಮದ್ ಇಜಾಝುದ್ದೀನ್ ಮತ್ತು ಮೊಹಮ್ಮದ್ ಅಸ್ಲಾಂ ಎಂದು ಗುರುತಿಸಲಾಗಿದೆ, 2013ರಲ್ಲಿ ಮದ್ಯಪ್ರದೇಶದ ಜೈಲಿನಿಂದ ತಪ್ಪಿಸಿಕೊಂಡು ಹೋದ ಐವರು ಸಿಮಿ ಉಗ್ರರಲ್ಲಿ ಇವರೂ ಸೇರಿದ್ದರು ಎಂದು ಹೇಳಲಾಗಿದೆ.
ಬಿಜನೋರ್ನ ಮನೆಯೊಂದರಲ್ಲಿ ನಡೆದ ಸ್ಫೋಟದಲ್ಲಿ ಇವರ ಕೈವಾಡವಿತ್ತು, ಪುಣೆ ಸ್ಫೋಟದಲ್ಲೂ ಇವರ ಹೆಸರು ಕೇಳಿಬಂದಿತ್ತು, ಪೊಲೀಸರು ಇವರಿಗೆ ಲುಕೌಟ್ ನೋಟಿಸ್ ಜಾರಿಗೊಳಿಸಿದ್ದರು. ಅಲ್ಲದೇ ಇವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.