ಬೆಂಗಳೂರು: ದೇಶದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಇತರ ರಾಷ್ಟ್ರಗಳ ಅವಲಂಬನೆ ಹೀಗೆಯೇ ಮುಂದುವರೆಯುವುದು ಸಾಧ್ಯವಿಲ್ಲ. ದೇಶದಲ್ಲೇ ರಕ್ಷಣಾ ವ್ಯವಸ್ಥೆಗಳನ್ನು ನಿರ್ಮಿಸಲು ಪೂರಕ ಕ್ರಮ ಕೈಗೊಳ್ಳುತ್ತಿರುವುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.
ಅವರು ನಗರದ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ನ ಹಗುರ ಯುದ್ಧ ವಿಮಾನಗಳ ತಯಾರಿಕೆಯ ಎರಡನೇ ಕಾರ್ಯಕ್ಷೇತ್ರವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ರಕ್ಷಣಾ ವ್ಯವಸ್ಥೆಗಳಿಗಾಗಿ ಇತರ ರಾಷ್ಟ್ರಗಳನ್ನು ಅವಲಂಬಿಸುವುದನ್ನು ತಪ್ಪಿಸಬೇಕು. ರಕ್ಷಣಾ ಕ್ಷೇತ್ರದಲ್ಲಿಯೂ ಸ್ವದೇಶೀ ನಿರ್ಮಿತ ವ್ಯವಸ್ಥೆಗಳು ಬರಬೇಕು. ಈಗಾಗಲೇ ಭಾರತ ನಿರ್ಮಿತ ತೇಜಸ್ ಎಂ 1 ಎ ಖರೀದಿಗೆ ಹೆಚ್ಚಿನ ರಾಷ್ಟ್ರಗಳು ಉತ್ಸಾಹ ತೋರಿವೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಎಚ್ಎಎಲ್ ವಿದೇಶೀ ಆರ್ಡರ್ಗಳನ್ನು ಪಡೆಯಲಿದೆ ಎಂದು ಅವರು ತಿಳಿಸಿದರು. ಕೊರೋನಾ ನಡುವೆಯೂ 48,000 ಕೋಟಿ ಆರ್ಡರ್ ಗಳನ್ನು ಪಡೆಯುವ ಮೂಲಕ ಎಚ್ಎಎಲ್ ಸಾಧನೆ ಮೆರೆದಿದೆ. ಮುಂದಿನ ದಿನಗಳಲ್ಲಿ ಏರೋಸ್ಪೇಸ್ ಕ್ಷೇತ್ರವನ್ನು ಮತ್ತಷ್ಟು ಎತ್ತರಕ್ಕೇರಿಸುವ ನಿಟ್ಟಿನಲ್ಲಿ ಇಂತಹ ಬೆಳವಣಿಗೆಗಳು ಪರಿಣಾಮಕಾರಿಯಾಗಲಿವೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.