ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಲ್ಪಟ್ಟಿದ್ದ ಕೆಪಿಎಸ್ಎಸಿಯ ಎಫ್ಡಿಎ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಫೆ. 28 ರಂದು ಈ ಪರೀಕ್ಷೆ ನಡೆಯಲಿದೆ.
ಜ. 24 ರಂದು ಎಫ್ಡಿಎ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಸಂಬಂಧ ಕೆಪಿಎಸ್ಸಿ ಕಾರ್ಯದರ್ಶಿ ಜಿ ಸತ್ಯವತಿ ಅವರು ಆದೇಶ ಹೊರಡಿಸಿದ್ದು, ಫೆ. 28 ರಂದು ಮುಂದೂಡಲ್ಪಟ್ಟಿರುವ ಪರೀಕ್ಷೆಗಳು ನಡೆಯಲಿರುವುದಾಗಿ ತಿಳಿಸಿದ್ದಾರೆ.
ಜನವರಿ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದರು. ಜೊತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವ ಬಂಧನವೂ ನಡೆದಿತ್ತು. ಹಾಗೆಯೇ ಬಂಧಿತರಿಂದ ಪ್ರಶ್ನೆ ಪತ್ರಿಕೆಗಳ ಜೊತೆಗೆ 24 ಲಕ್ಷ ರೂ. ನಗದನ್ನು ಸಹಿತ ವಶಕ್ಕೆ ಪಡೆಯಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.