ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಯಮಗಳು ಸಿದ್ಧತೆಯಲ್ಲಿವೆ. ಎನ್ಆರ್ಸಿ ಅನ್ನು ಜಾರಿಗೊಳಿಸುವ ಯೋಜನೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ನಿತ್ಯಾನಂದ್ ರಾಯ್ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), 2019 ಅನ್ನು ಡಿಸೆಂಬರ್ 12, 2019 ರಂದು ಅಧಿಸೂಚಿಸಲಾಯಿತು ಮತ್ತು ಇದು 2020 ರ ಜನವರಿ 10 ರಿಂದ ಜಾರಿಗೆ ಬಂದಿದೆ.
“ಪೌರತ್ವ (ತಿದ್ದುಪಡಿ) ಕಾಯ್ದೆ, 2019 ರ ಅಡಿಯಲ್ಲಿನ ನಿಯಮಗಳು ಸಿದ್ಧತೆಯಲ್ಲಿವೆ. ಸಿಎಎ ಅಡಿಯಲ್ಲಿ ಈ ನಿಯಮಗಳನ್ನು ರೂಪಿಸಲು ಅಧೀನ ಶಾಸನ, ಲೋಕಸಭೆ ಮತ್ತು ರಾಜ್ಯಸಭೆಯ ಸಮಿತಿಗಳು ಕ್ರಮವಾಗಿ ಏಪ್ರಿಲ್ 9 ಮತ್ತು ಜುಲೈ 9 ರವರೆಗೆ ಸಮಯವನ್ನು ವಿಸ್ತರಿಸಲು ಅನುಮತಿ ನೀಡಿವೆ” ಎಂದು ರಾಯ್ ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.
ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಕುರಿತು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಸರ್ಕಾರ ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಎನ್ಆರ್ಸಿಯು ಸಿಎಎಯನ್ನು ಅನುಸರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ಹೇಳಿದ್ದರು. ಅಕ್ರಮ ವಲಸಿಗರನ್ನು ಗುರುತಿಸಲು ಎನ್ಆರ್ಸಿಯನ್ನು ಯೋಜಿಸಲಾಗಿದೆ ಎಂದು ಸರ್ಕಾರ ತಿಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.