ನವದೆಹಲಿ: ಗಣರಾಜ್ಯೋತ್ಸವದಂದು ಹಿಂಸಾಚಾರ ನಡೆಯಲು ಕಾರಣರಾದ ದೀಪ್ ಸಿಧು, ಜುಗರಾಜ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ದೆಹಲಿ ಪೊಲೀಸರು ಬುಧವಾರ ತಲಾ 1 ಲಕ್ಷ ರೂಪಾಯಿ ಘೋಷಿಸಿದ್ದಾರೆ ಮತ್ತು ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 50,000 ರೂ ಘೋಷಿಸಿದ್ದಾರೆ.
ಇವರನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರ ತಂಡಗಳು ಪಂಜಾಬ್ನಲ್ಲಿ ಶೋಧ ನಡೆಸುತ್ತಿವೆ. ಪಂಜಾಬಿ ನಟ ದೀಪ್ ಸಿಧು ಅವರು ಫೇಸ್ಬುಕ್ ಖಾತೆಯಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡುತ್ತಿದ್ದಾರೆ. ವೀಡಿಯೊದಲ್ಲಿ ಅವರು ಪಂಜಾಬಿಯಲ್ಲಿ ಮಾತನಾಡುತ್ತಿರುವುದು ಕಂಡುಬರುತ್ತಿದೆ. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಜನವರಿ 26 ರಂದು ಭುಗಿಲೆದ್ದ ಕೆಂಪು ಕೋಟೆ ಹಿಂಸಾಚಾರ ಪ್ರಕರಣದಲ್ಲಿ ಸಿಧು ಪೊಲೀಸರಿಗೆ ಬೇಕಾಗಿದ್ದಾರೆ.
ರೈತರ ಟ್ರಾಕ್ಟರ್ ಪೆರೇಡ್ ವೇಳೆ ನಡೆದ ಹಿಂಸಾಚಾರದ ನಂತರ, ದೆಹಲಿ ಪೊಲೀಸರು ವಿವಿಧ ಗಲಭೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ವಿವಿಧ ಪ್ರಕರಣಗಳಲ್ಲಿ 122 ಜನರನ್ನು ಬಂಧಿಸಿದ್ದಾರೆ, ಜೊತೆಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 44 ಪ್ರಕರಣಗಳನ್ನು ದಾಖಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.