ಬೆಂಗಳೂರು: ಕೊರೋನಾ ಸಂದರ್ಭದಲ್ಲಿಯೂ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ದೇಶದಲ್ಲಿ ಕರ್ನಾಟಕ ರಾಜ್ಯ ಮೊದಲನೇ ಸ್ಥಾನವನ್ನು ಕಾಪಿಟ್ಟುಕೊಂಡಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಕೊರೋನಾ ಸಂಕಷ್ಟ ಇಡೀ ವಿಶ್ವದ ಆರ್ಥಿಕತೆ ಮತ್ತು ಅಭಿವೃದ್ಧಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಆದರೆ ಉದ್ಯಮ ಕ್ಷೇತ್ರದ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ರಾಜ್ಯ ದಾಖಲೆ ನಿರ್ಮಿಸಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕೈಗಾರಿಕೆ ಮತ್ತು ಉದ್ಯಮಗಳಿಗೆ ನೀಡುತ್ತಿರುವ ಬೆಂಬಲದ ಫಲವಾಗಿ ರಾಜ್ಯ ಸರ್ಕಾರ ಹೂಡಿಕೆಗೆ ಸಂಬಂಧಿಸಿದಂತೆ ಈ ಸಾಧನೆಯನ್ನು ಮಾಡುವುದು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಈ ಹಿಂದೆ ಆರಂಭಿಸಲು ನಿರ್ಧರಿಸಲಾಗಿರುವ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಕಾರ್ಯಪಡೆಯನ್ನೂ ರಚಿಸಲಾಗಿದೆ. ಹಾಗೆಯೇ ಕೊರೋನಾ ನಂತರದಲ್ಲಿ ಚೀನಾದಿಂದ ಸ್ಥಳಾಂತರವಾಗುತ್ತಿರುವ ಕಂಪನಿಗಳನ್ನು ಭಾರತಕ್ಕೆ ಸೆಳೆಯುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಂಪನಿಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ನೇಮಕ ಮಾಡಲಾಗಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.