ಬೆಂಗಳೂರು: ನವದೆಹಲಿಯಲ್ಲಿ ರೈತರ ಹೋರಾಟವನ್ನು ದಾರಿತಪ್ಪಿಸುವ ಕೆಲಸವಾಗುತ್ತಿದೆ. ಇದು ವಿದೇಶಿ ಪ್ರಚೋದಿತ ಕೃತ್ಯವಾಗಿದ್ದು, ಇದರಲ್ಲಿ ಎಡಚರರೇ ಹೆಚ್ಚಿನ ಸಂಖ್ಯೆಯಲ್ಲಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಕೇಂದ್ರದ ಮೋದಿ ಸರ್ಕಾರ ಕೃಷಿ ಸುಧಾರಣಾ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ, ಅವರಿಗೆ ಅವರ ಉತ್ಪನ್ನಗಳನ್ನು ಅವರು ಇಚ್ಛೆ ಪಟ್ಟಲ್ಲಿ ಮಾರಾಟ ಮಾಡುವ, ನೇರವಾಗಿ ಅವರೇ ದರ ನಿಗದಿ ಮಾಡುವ ಅವಕಾಶ ನೀಡಿದೆ. ಇದು ರೈತ ಸ್ನೇಹಿಯಾಗಿದ್ದರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಈಗಾಗಲೇ 11 ಸುತ್ತಿನ ಮಾತುಕತೆ ಮುಗಿದಿದೆ. ಆದರೂ ಪ್ರತಿಭಟನಾ ನಿರತರು ಮಾತ್ರ ಇವೆಲ್ಲವನ್ನೂ ಮೂಲೆಗುಂಪಾಗಿಸಿರುವುದು ದುರಂತ ಎಂದು ಕಟೀಲ್ ಹೇಳಿದ್ದಾರೆ.
ಇದು ಸ್ಥಾಪಿತ ಹಿತಾಸಕ್ತಿಗಳ ಕುಮ್ಮಕ್ಕಿನಿಂದ ನಡೆಯುತ್ತಿರುವ ಪ್ರತಿಭಟನೆ. ಇದಕ್ಕೆ ಗಣ್ಯರೆನಿಸಿಕೊಂಡವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನೀಡುವುದು ಸರಿಯಲ್ಲ ಎಂದು ಹೇಳಿದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.