ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ಮಾಡಿರುವ ಕೃಷಿ ಕಾಯ್ದೆಗಳನ್ನು ಅಮೆರಿಕಾ ಬೆಂಬಲಿಸಿದೆ. ಭಾರತದಲ್ಲಿ ಮಾರುಕಟ್ಟೆಗಳ ದಕ್ಷತೆಯನ್ನು ಬಲಪಡಿಸುವ ಕ್ರಮಗಳನ್ನು, ಹೆಚ್ಚಿನ ಖಾಸಗಿ ಹೂಡಿಕೆಗಳಿಗೆ ಅನುವು ಮಾಡಿಕೊಡುವ ಕ್ರಮಗಳನ್ನು ಸ್ವಾಗತಿಸುವುದಾಗಿ ಅಮೆರಿಕ ಹೇಳಿದೆ.
ಶಾಂತಿಯುತ ಪ್ರತಿಭಟನೆಗಳು ಪ್ರಬುದ್ಧ ಪ್ರಜಾಪ್ರಭುತ್ವದ ಲಕ್ಷಣ ಎಂದಿದೆ.
ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಅಮೆರಿಕ ಸ್ಟೇಟ್ಸ್ ಡಿಪಾರ್ಟ್ಮೆಂಟ್ ವಕ್ತಾರರು ಹೇಳಿದ್ದಾರೆ.
ಭಾರತದಲ್ಲಿ ಮಾರುಕಟ್ಟೆಗಳ ದಕ್ಷತೆಯನ್ನು ಬಲಪಡಿಸುವ ಕ್ರಮಗಳನ್ನು, ಹೆಚ್ಚಿನ ಖಾಸಗಿ ಹೂಡಿಕೆಗಳಿಗೆ ಅನುವು ಮಾಡಿಕೊಡುವ ಕ್ರಮಗಳನ್ನು ಸ್ವಾಗತಿಸುವುದಾಗಿ ಹೇಳುವ ಮೂಲಕ ಕೃಷಿ ಕಾಯ್ದೆಗಳಿಗೆ ಬೆಂಬಲ ಇದೆ ಎಂಬುದನ್ನು ಅಮೆರಿಕಾ ಸೂಚಿಸಿದಂತಾಗಿದೆ.
ಆದರೆ ಕೆಲವು ಅಮೆರಿಕ ರಾಜಕಾರಣಿಗಳು ಪ್ರತಿಭಟನಾನಿರತರ ಪರವಾದ ಹೇಳಿಕೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.