ಬೆಂಗಳೂರು: ಕೊರೋನಾ ಸೋಂಕಿನ ಅಬ್ಬರ ಕಡಿಮೆಯಾಗಿದ್ದರೂ, ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ನಿರ್ದಿಷ್ಟ ಸಂದರ್ಭಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.
ಮದುವೆ ಸಮಾರಂಭಗಳು ಮತ್ತು ಶವ ಸಂಸ್ಕಾರದ ಸಂದರ್ಭದಲ್ಲಿ 500 ಜನರಿಗೆ ಒಟ್ಟು ಸೇರುವುದಕ್ಕೆ ಈ ಪರಿಷ್ಕೃತ ಮಾರ್ಗಸೂಚಿಯಲ್ಲಿ ಅವಕಾಶವನ್ನು ನೀಡಲಾಗಿದೆ. ಹಾಗೆಯೇ ಸಮಾರಂಭಗಳಲ್ಲಿ ಸ್ಯಾನಿಟೈಸ್ ಮಾಡುವುದು, ಮಾಸ್ಕ್ ಧರಿಸುವುದು, ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಮಾಡುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಥರ್ಮಲ್ ಸ್ಕ್ಯಾನಿಂಗ್ ಮೊದಲಾದ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಸಂಸ್ಥೆಗಳು ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದರ ಜೊತೆಗೆ ವರ್ಕ್ ಫ್ರಂ ಹೋಂ ವ್ಯವಸ್ಥೆಯನ್ನು ಆಯ್ಕೆ ಮಾಡುವುದಕ್ಕೂ ಅವಕಾಶವನ್ನು ಒದಗಿಸಬೇಕು. ಪಾಳಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕೂ ಸಂಸ್ಥೆಗಳು ನೌಕರರಿಗೆ ಅವಕಾಶವನ್ನು ನೀಡಬೇಕು ಎಂದು ಮಾರ್ಗಸೂಚಿ ಸ್ಪಷ್ಟಪಡಿಸಿದೆ. ಮೆಟ್ರೋಗಳಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಅನುಮತಿ ಇಲ್ಲ. ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಗುಂಪು ಸೇರುವುದನ್ನು ಕಡ್ಡಾಯವಾಗಿ ನಿಯಂತ್ರಿಸಬೇಕು. ಯೋಗ ಕೇಂದ್ರಗಳಲ್ಲಿ, ಜಿಮ್ಗಳಲ್ಲಿಯೂ ಪಾಳಿ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಜನರು ಗುಂಪುಗೂಡುವುದನ್ನು ತಪ್ಪಿಸಬೇಕು ಎಂದು ರಾಜ್ಯ ಸರ್ಕಾರ ತನ್ನ ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.