ನವದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಮತ್ತು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರ ಅಭಿಪ್ರಾಯಗಳನ್ನು ಬಲವಾಗಿ ಖಂಡಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು, “ಭಾರತವನ್ನು ಗುರಿಯಾಗಿಸಿಕೊಂಡು ಪ್ರಚೋದಿತ ಅಭಿಯಾನಗಳು ಎಂದಿಗೂ ಯಶಸ್ವಿಯಾಗುವುದಿಲ್ಲ” ಎಂದು ಹೇಳಿದ್ದಾರೆ.
ದೆಹಲಿಯ ವಿವಿಧ ಗಡಿಗಳಲ್ಲಿ ಕಿರಿಕಿರಿ ಉಂಟುಮಾಡುತ್ತಿರುವ ಪ್ರತಿಭಟನಾಕಾರರಿಗೆ ರಿಹಾನ್ನಾ ಬೆಂಬಲ ನೀಡುವ ಟ್ವೀಟ್ ಮಾಡಿದ ನಂತರ ಪ್ರಮುಖ ಅಂತಾರಾಷ್ಟ್ರೀಯ ಗಣ್ಯರು ಮತ್ತು ಕಾರ್ಯಕರ್ತರು ಮತ್ತು ರಾಜಕಾರಣಿಗಳು ಬೆಂಬಲವನ್ನು ನೀಡಲು ಆರಂಭಿಸಿದ್ದರು. ಇದಕ್ಕೆ ವಿದೇಶಾಂಗ ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
“ಭಾರತವನ್ನು ಗುರಿಯಾಗಿಸಿಕೊಂಡು ಪ್ರಚೋದಿತ ಅಭಿಯಾನಗಳು ಎಂದಿಗೂ ಯಶಸ್ವಿಯಾಗುವುದಿಲ್ಲ. ನಮ್ಮನ್ನು ಸಂಭಾಳಿಸಲು ಇಂದು ನಮಗೆ ಆತ್ಮವಿಶ್ವಾಸವಿದೆ. ಈ ಭಾರತ ಇದನ್ನು ಹಿಂದಕ್ಕೆ ತಳ್ಳುತ್ತದೆ” ಎಂದು ಜೈಶಂಕರ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಅವರು #IndiaTogether ಮತ್ತು #IndiaAgainstPropaganda ಎಂಬ ಹ್ಯಾಶ್ಟ್ಯಾಗ್ಗಳನ್ನು ಸಹ ಬಳಸಿದ್ದಾರೆ.
ಭಾರತದ ಸಾಕಷ್ಟು ಸೆಲೆಬ್ರಿಟಿಗಳು ಕೂಡ ಇದೇ ಹ್ಯಾಶ್ಟ್ಯಾಗ್ ಬಳಸಿ ಭಾರತ ಒಂದಾಗಿದೆ, ವಿದೇಶಿಗರು ನಮ್ಮ ವಿಷಯಕ್ಕೆ ಮೂಗು ತೂರಿಸುವುದು ಬೇಡ ಎಂಬ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.