ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಇನ್ನು ಒಂದು ತಿಂಗಳಲ್ಲಿ ತುಂಬಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಕ್ಕೆ ಮುಂದಿನ ಒಂದು ತಿಂಗಳೊಳಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬಹಳ ವರ್ಷಗಳಿಂದ ಇಂತಹ ನೇಮಕಾತಿ ಪ್ರಕ್ರಿಯೆ ರಾಜ್ಯದಲ್ಲಿ ನಡೆದಿರಲಿಲ್ಲ. ಇದೇ ಮೊದಲ ಬಾರಿಗೆ 1246 ಸಾಮಾನ್ಯ ಕರ್ತವ್ಯ ವೈದ್ಯರು, 824 ತಜ್ಞ ವೈದ್ಯರ ನೇಮಕವನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಒಂದು ತಿಂಗಳಲ್ಲಿ ವೈದ್ಯಾಧಿಕಾರಿಗಳ ನೇಮಕವನ್ನು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಂಬಂಧಿಸಿದಂತೆ ಮಾಡಲಾಗುತ್ತದೆ. ಆ ಬಳಿಕ ಮುಂದಿನ ಮೂರು- ನಾಲ್ಕು ತಿಂಗಳೊಳಗಾಗಿ ಉಳಿದ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದಾಗಿ ಸಚಿವರು ಹೇಳಿದ್ದಾರೆ. ಹಾಗೆಯೇ ರಾಜ್ಯದ ಪ್ರತಿ 35 ಸಾವಿರ ಜನರಿಗೆ ಒಂದರಂತೆ ಆಂಬ್ಯುಲೆನ್ಸ್ ಗಳನ್ನು ಒದಗಿಸುವುದು ಸೇರಿದಂತೆ ಒಟ್ಟು 12 ವಿಧದ ಉತ್ಕೃಷ್ಟ ಆರೋಗ್ಯ ಸೇವೆಯನ್ನು ಜನರಿಗೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿರುವುದಾಗಿಯೂ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.