ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಬಗ್ಗೆ ನಿಗಾ ಇರಿಸಲು ಇಲಾಖೆಯಲ್ಲಿ ಪಶುವೈದ್ಯರು ಮತ್ತು ಗ್ರೂಪ್ ಬಿ ಉದ್ಯೋಗಗಳನ್ನು ಹೊರಗುತ್ತಿಗೆ ನೀಡಲು ಸರ್ಕಾರ ಉದ್ದೇಶಿಸಿರುವುದಾಗಿ ಸಚಿವ ಪ್ರಭು ಚೌಹಾಣ್ ಅವರು ವಿಧಾನಸಭಾ ಅಧಿವೇಶನದಲ್ಲಿ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಭಾಗದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಯುತ್ತಿದೆ, ಗೋ ಹತ್ಯೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮತೀಯ ಗಲಭೆಗಳೂ ಹೆಚ್ಚಾಗುತ್ತಿವೆ. ಹಾಗೆಯೇ ದಕ್ಷಿಣ ಕನ್ನಡದ ಗಡಿ ಪ್ರದೇಶದಲ್ಲಿ ಗೋಮಾಂಸವನ್ನು ಅವ್ಯಾಹತವಾಗಿ ಕಳ್ಳ ಸಾಗಾಟ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋ ಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಳ್ಳಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಟನ್ ಜೊತೆಗೆ ಗೋಮಾಂಸವನ್ನು ಬೆರೆಸಿ ನೀಡುವ ಕೆಲಸಗಳೂ ನಡೆಯುತ್ತಿವೆ. ಇದರ ಪರೀಕ್ಷೆಗೆ ಪೂರಕ ಪಶುವೈದ್ಯರು, ಸಿಬ್ಬಂದಿಗಳು ಇಲ್ಲದೇ ಇರುವುದರಿಂದಲೇ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ ಎಂದು ಶಾಸಕ ಭರತ್ ಶೆಟ್ಟಿ ಅವರು ಸರ್ಕಾರದ ಗಮನಕ್ಕೆ ತಂದರು.
ಇದಕ್ಕೆ ಉತ್ತರಿಸಿದ ಚೌಹಾಣ್, ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಪಶುಸಂಗೋಪನಾ ಇಲಾಖೆಯಲ್ಲಿ ಸದ್ಯ 50% ಗಳಷ್ಟು ಸಿಬ್ಬಂದಿಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರು ಮತ್ತು ಸಿಬ್ಬಂದಿಗಳ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಈ ವಿಚಾರವನ್ನು ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಇಲಾಖೆಯ ಗಮನಕ್ಕೂ ತರಲಾಗಿದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಿದ ತಕ್ಷಣದಲ್ಲೇ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರು, ಸಿಬ್ಬಂದಿಗಳ ನೇಮಕ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.