ನವದೆಹಲಿ: ರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಅನುಸಾರವಾಗಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ಮಂಜೂರು ಮಾಡಿದ ಐದು ಎಕರೆ ಜಮೀನಿನ ಮಾಲೀಕತ್ವ ತಮ್ಮದೆಂದು ವಾದಿಸಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠದ ಮೆಟ್ಟಿಲೇರಿದ್ದಾರೆ.
ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠದ ಮುಂದೆ ಇವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯದ ನೋಂದಾವಣೆಯಲ್ಲಿ ದಾಖಲಿಸಲಾಗಿದ್ದು, ಫೆಬ್ರವರಿ 8 ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ರಾಣಿ ಕಪೂರ್ ಅಲಿಯಾಸ್ ರಾಣಿ ಬಲೂಜಾ ಮತ್ತು ರಾಮ ರಾಣಿ ಪಂಜಾಬಿ ತಮ್ಮ ತಂದೆ ಜ್ಞಾನ ಚಂದ್ರ ಪಂಜಾಬಿ 1947 ರಲ್ಲಿ ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದು ಫೈಜಾಬಾದ್ ಜಿಲ್ಲೆಯಲ್ಲಿ ನೆಲೆಸಿದ್ದರು ಎಂದು ರಿಟ್ ಅರ್ಜಿಯಲ್ಲಿ ತಿಳಿಸಿದ್ದಾರೆ.
ತಮ್ಮ ತಂದೆಗೆ ಧನ್ನಿಪುರ ಗ್ರಾಮದಲ್ಲಿ 28 ಎಕರೆ ಭೂಮಿಯನ್ನು ಐದು ವರ್ಷಗಳ ಕಾಲ ನಜುಲ್ ಇಲಾಖೆಯಿಂದ ಮಂಜೂರು ಮಾಡಲಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ನಂತರ, ಅವರ ಹೆಸರನ್ನು ಕಂದಾಯ ದಾಖಲೆಗಳಲ್ಲಿ ಸೇರಿಸಲಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಆದರೂ, ತಮ್ಮ ತಂದೆಯ ಹೆಸರನ್ನು ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕನ್ಸಾಲಿಡೇಶನ್ ಪ್ರಕ್ರಿಯೆ ಸಮಯದಲ್ಲಿ ಅಧಿಕಾರಿ ಮತ್ತೆ ತಮ್ಮ ತಂದೆಯ ಹೆಸರನ್ನು ದಾಖಲೆಗಳಿಂದ ತೆಗೆದುಹಾಕಿದ್ದಾರೆ.ಈ ಬಗ್ಗೆ ಅರ್ಜಿ ಸಲ್ಲಿಸಿದ್ದೇವೆ. ಇದು ಇತ್ಯರ್ಥವಾಗುವುದು ಬಾಕಿ ಇರುವಂತೆಯೇ ಭೂಮಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.