ಮೈಸೂರು: ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ತೃತೀಯಲಿಂಗಿ ದೇವಿಕಾ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದ ಮೊದಲ ಮಂಗಳಮುಖಿ ಎಂಬ ಕೀರ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ದೇವಿಕ ಅವರು ನಗರದ ಸಾಲಿಗ್ರಾಮ ಗ್ರಾಮ ಪಂಚಾಯತ್ನ 7 ನೇ ವಾರ್ಡ್ ನಲ್ಲಿ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 5 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಗ್ರಾಮ ಪಂಚಾಯತ್ಗೆ ಸಂಬಂಧಿಸಿದಂತೆ ಅಧ್ಯಕ್ಷ ಸ್ಥಾನಕ್ಕೆ ಎಸ್ ಸಿ ಮಹಿಳೆಗೆ ಮೀಸಲಾತಿ ದೊರೆತಿತ್ತು. ಎಸ್ ಸಿ ಸಮುದಾಯಕ್ಕೆ ಸೇರಿದ ದೇವಿಕ ಅವರು ಇದೀಗ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಸಂಬಂಧ ಮಾತನಾಡಿರುವ ದೇವಿಕಾ, ಸರ್ಕಾರದ ಎಲ್ಲಾ ಸವಲತ್ತುಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ವರೆಗೆ ಮಂಗಳಮುಖಿಯರನ್ನು ಅಪಹಾಸ್ಯ ಮಾಡುವ ಪರಿಸ್ಥಿತಿ ಇತ್ತು. ಈಗ ಸಮಾಜ ಬದಲಾಗಿದೆ. ನನಗೆ ಈ ಅವಕಾಶವನ್ನು ಒದಗಿಸಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.