ಬೆಂಗಳೂರು: ರಾಜ್ಯದಲ್ಲಿ ತಯಾರಿಸಲಾಗುವ ಹಾಲು, ಹಾಲಿನ ಉತ್ಪನ್ನಗಳು ದೇಶದ ಗಡಿ ದಾಟಿ ವಿದೇಶದಲ್ಲಿಯೂ ತನ್ನ ಮಾರುಕಟ್ಟೆ ವಿಸ್ತರಣೆಗೆ ಪರವಾನಿಗೆ ಪಡೆದುಕೊಂಡಿದೆ. ರಾಜ್ಯದ ಮೂರು ಜಿಲ್ಲೆಗಳು ಹಾಲು ಉತ್ಪಾದಕರ ಒಕ್ಕೂಟಗಳು ವಿದೇಶಕ್ಕೆ ರಫ್ತು ಮಾಡುವುದಕ್ಕೆ ಸಂಬಂಧಿಸಿದಂತೆ ಲೈಸೆನ್ಸ್ ಪಡೆದುಕೊಂಡಿವೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳು (ಬಮುಲ್) ಪರವಾನಿಗೆಯನ್ನು ಪಡೆದುಕೊಂಡಿವೆ. ಹಾಲು ಉತ್ಪಾದಕ ಸಂಘಗಳ ಮಾರುಕಟ್ಟೆ ವಿಭಾಗವಾದ ಕರ್ನಾಟಕ ಹಾಲು ಒಕ್ಕೂಟ ಮತ್ತು ಥರ್ಡ್ ಪಾಟ್ರಿ ಎಕ್ಸ್ಪೋರ್ಟ್ ಗಳು ಸಮೀಕ್ಷೆಯೊಂದನ್ನು ಪ್ರಾರಂಭಿಸಲು ಸಜ್ಜಾಗಿದೆ. ವಿದೇಶೀ ಮಾರುಕಟ್ಟೆಗೆ ಸಂಬಂಧಿಸಿದಂತೆ ಹಾಲಿನ ಉತ್ಪನ್ನಗಳ ಬೇಡಿಕೆಯ ಬಗ್ಗೆ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಈ ಸಮೀಕ್ಷೆ ನಡೆಸಲಾಗುತ್ತಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಬಮುಲ್ ಅಧ್ಯಕ್ಷ ನರಸಿಂಹಮೂರ್ತಿ, ಗುಣಮಟ್ಟದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ಅಗತ್ಯವಿರುವ ಎಲ್ಲಾ ಅವಶ್ಯಕತೆಗಳನ್ನು, ಆಧುನಿಕ ಯಂತ್ರಗಳು, ತಂತ್ರಜ್ಞಾನಗಳನ್ನು ಸಹ ಅಳವಡಿಸಿಕೊಳ್ಳಲಾಗಿದೆ. ಈ ಎಲ್ಲಾ ಅಂಶಗಳನ್ನು ರಫ್ತು ಪರಿಶೀಲನಾ ಮಂಡಳಿ ಗುರುತಿಸಿದೆ. ಜಾಗತಿಕ ಹಂತದಲ್ಲಿ ರಾಜ್ಯದ ಉತ್ಪನ್ನಗಳನ್ನು ಗುರುತಿಸುವುದಕ್ಕಾಗಿ ಬ್ರಾಂಡ್ ನಿರ್ಮಾಣ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಒಕ್ಕೂಟದ ಕಾರ್ಯ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.