ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಘೋಷಣೆ ಮಾಡಲಾಗಿರುವ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಮಾರ್ಚ್ ಅಂತ್ಯದಲ್ಲಿ ಈಗಾಗಲೇ ಘೋಷಣೆ ಮಾಡಲಾದ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕೊರೋನಾದಿಂದ ಕಂಗೆಟ್ಟಿದ್ದ ಶಾಸಕರಿಗೆ ಮುಖ್ಯಮಂತ್ರಿಯವರು ನೀಡಿರುವ ಈ ಭರವಸೆಯಿಂದ ಕೊಂಚ ನಿರಾಳವೆನಿಸಿದೆ.
ಈಗಾಗಲೇ ಘೋಷಿಸಲಾಗಿರುವ 85% ಗಳಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಅನುದಾನ ಸಿಕ್ಕಿಲ್ಲ ಎಂದು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಆತಂಕ ಪಡುವ ಅಗತ್ಯವಿಲ್ಲ. ಕೊರೋನಾ ಸಂಕಷ್ಟದ ಕಾರಣದಿಂದಾಗಿ ಈ ಅನುದಾನವನ್ನು ಆರ್ಥಿಕ ಇಲಾಖೆ ತಡೆ ಹಿಡಿದಿತ್ತು. ಮಾರ್ಚ್ ಅಂತ್ಯದಲ್ಲಿ ಈ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.