ಬೆಂಗಳೂರು: ಸ್ಥಳೀಯ ಕೈಗಾರಿಕೆಗಳು, ಕಂಪೆನಿಗಳಲ್ಲಿ ರಾಜ್ಯದಲ್ಲಿನ ಯುವಜನರಿಗೆ ಪೂರಕ ಉದ್ಯೋಗ ದೊರೆಯುವುದಕ್ಕೆ ಪೂರಕವಾಗಿ ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂಬ ವಿಚಾರವನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, 50ಕ್ಕಿಂತ ಅಧಿಕ ಉದ್ಯೋಗಿಗಳಿರುವಲ್ಲಿ ಈ ಕ್ರಮವನ್ನು ಜಾರಿ ಮಾಡಬೇಕಿದೆ. ಸಿ ಮತ್ತು ಡಿ ಗ್ರೂಪ್ ಹುದ್ದೆಗಳಿಗೆ ಸಂಬಂಧಿಸಿದಂತೆ 100%, ಬಿ ಗ್ರೂಪ್ ನೌಕರರಿಗೆ ಸಂಬಂಧಿಸಿದಂತೆ 85% ಮತ್ತು ಎ ಶ್ರೇಣಿಗೆ ಸಂಬಂಧಿಸಿದಂತೆ 65% ಹುದ್ದೆಗಳನ್ನು ಕನ್ನಡಿಗರಿಗೇ ನೀಡಬೇಕು ಎಂಬ ನಿಯಮವಿದೆ. ಇದನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ರಾಜ್ಯದ ಜನರಿಗೆ ಉದ್ಯೋಗ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರೆಯುವುದಕ್ಕೆ ಪೂರಕವಾಗುವಂತೆ ಈ ಹಿಂದೆಯೇ ಜಿಲ್ಲಾಧಿಕಾರಿಗಳ ಸಮಕ್ಷಮದಲ್ಲಿ ಸಭೆ ನಡೆಸಲಾಗಿದೆ. ಕೈಗಾರಿಕಾ ಉದ್ಯೋಗ ನೀತಿಯಲ್ಲಿಯೂ 2019 ರಲ್ಲಿ ತಿದ್ದುಪಡಿ ತರಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಸ್ಥಳೀಯರಿಗೆ ಉದ್ಯೋಗಾವಕಾಶದ ಭರವಸೆಯನ್ನು ಹೆಚ್ಚಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.