ಬೆಂಗಳೂರು: ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಾಗಿದ್ದ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳಲಾಗಿದೆ.
ಫೆಬ್ರವರಿ ಅಂತ್ಯದ ವೇಳೆಗೆ ಈ ಸಮ್ಮೇಳನ ನಡೆಯಬೇಕಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಹೆಚ್ಚು ಜನ ಭಾಗಿಯಾದರೆ ಸಮಸ್ಯೆಯಾಗುತ್ತದೆ. ಕೊರೋನಾ ನಿಯಮಗಳ ಪಾಲನೆಯೂ ಕಷ್ಟವಾಗುತ್ತದೆ. ಜೊತೆಗೆ ಈ ಹಿಂದೆ ನಿಗದಿ ಮಾಡಿದ್ದ ದಿನಾಂಕದಂದು ಸಮ್ಮೇಳನ ನಡೆಸುವುದಕ್ಕೆ ಪೂರಕವಾಗಿ ಸಿದ್ಧತೆಗಳೂ ಆಗಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಹಾವೇರಿ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿರುವುದಾಗಿ ಸರ್ಕಾರ ತಿಳಿಸಿದೆ.
ಸಮ್ಮೇಳನ ನಡೆಸಲು ಮುಂದಿನ ದಿನಾಂಕವನ್ನು ಈ ತಿಂಗಳಾಂತ್ಯದಲ್ಲಿ ನಡೆಸುವ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.