ಬೆಂಗಳೂರು: ರಾಜ್ಯದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ ಅವ್ಯವಹಾರಗಳನ್ನು ತಡೆಯಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಂಗಳೂರಿನ ಸಮಗ್ರ ಚಿತ್ರಣವೇ ಬದಲಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಬಿಡಿಎಯಲ್ಲಿ ಅವ್ಯಾಹತವಾಗಿ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ. ಅಂತಹವುಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎಸ್ಐಟಿ ತಂಡವನ್ನೂ ರಚನೆ ಮಾಡಲಾಗಿದೆ. 2020 ರ ಜೂನ್ ವರೆಗೆ ಸುಮಾರು 400 ಕೋಟಿ ರೂ. ಗಳಷ್ಟು ಅಕ್ರಮ ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
2019 ರಿಂದ ತೊಡಗಿದಂತೆ ಅಕ್ರಮ ಎಸಗಿರುವ 22 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೊತೆಗೆ ಅಕ್ರಮವಾಗಿ ಅತಿಕ್ರಮಣ ಮಾಡಲಾಗಿದ್ದ 300 ಎಕರೆ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗಿರುವುದಾಗಿಯೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬಿಡಿಎಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಂಪ್ಯೂಟರೀಕರಣ ಮಾಡಲಾಗಿರುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.