ನವದೆಹಲಿ: ಸರಳ ಕ್ರಮಗಳು ಮತ್ತು ಸಾರ್ವಜನಿಕ ಆರೋಗ್ಯ ಪರಿಹಾರಗಳನ್ನು ಬಳಸಿಕೊಂಡು ಕೋವಿಡ್-19 ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಭಾರತದ ಮಹತ್ವದ ಪ್ರಗತಿಯನ್ನು ಸಾಧಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಮಹಾನಿರ್ದೇಶಕ ಡಾ.ಟೆಡ್ರೋಸ್ ಅಧಾನಂ ಗೆಬ್ರಿಯಾಸಿಸ್ ಹೇಳಿದ್ದಾರೆ.
ವೈರಸ್ ಅನ್ನು ಸೋಲಿಸಲು ಭಾರತ ಕೈಗೊಂಡ ಕ್ರಮಗಳನ್ನು ಅನುಸರಿಸಬೇಕೆಂದು WHO ಮುಖ್ಯಸ್ಥರು ಇತರ ರಾಷ್ಟ್ರಗಳಿಗೆ ಕರೆ ನೀಡಿದರು. ಲಸಿಕೆ ತಯಾರಿಕೆ ಮತ್ತು ನಿರ್ವಹಣೆಯ ಬೆಳವಣಿಗೆಯೊಂದಿಗೆ, ನಾವು ಇನ್ನೂ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು ಎಂದು ಅವರು ಹೇಳಿದ್ದಾರೆ.
ಕೋವಿಡ್-19 ಪ್ರಕರಣಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುವಲ್ಲಿ ಭಾರತ ಹೆಚ್ಚಿನ ಪ್ರಗತಿಯನ್ನು ತೋರಿಸಿದೆ ಎಂದು ಟೆಡ್ರೋಸ್ ಹೇಳಿದ್ದಾರೆ.
“ಈ ಸರಳ ಸಾರ್ವಜನಿಕ ಆರೋಗ್ಯ ಪರಿಹಾರಗಳನ್ನು ನಾವು ಮಾಡಲು ಸಾಧ್ಯವಾದರೆ, ನಾವು ವೈರಸ್ ಅನ್ನು ಸೋಲಿಸಬಹುದು ಎಂದು ಇದು ನಮಗೆ ತೋರಿಸುತ್ತದೆ. ಲಸಿಕೆಗಳನ್ನು ಬಳಸುವುದರೊಂದಿಗೆ, ನಾವು ಹೆಚ್ಚು ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.