ನವದೆಹಲಿ: ಈಗಾಗಲೇ ಭಾರತದಲ್ಲಿ ಕೋವಿಡ್-19 ಲಸಿಕೆ ಆರಂಭವಾಗಿದ್ದು, ಮುಂಚೂಣಿ ಕಾರ್ಮಿಕರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಉಚಿತ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆ ಕಾರ್ಯಾಚರಣೆ ವೆಚ್ಚವಾಗಿ ರೂ. 123.49 ಕೋಟಿಯನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಲೋಕಸಭೆಗೆ ಮಾಹಿತಿಯನ್ನು ನೀಡಿದ ಸಚಿವ ಅಶ್ವಿನಿ ಚೌಬೆ ಅವರು, ಜನವರಿ 16ರಿಂದ ಆರಂಭಗೊಂಡಿರುವ ಕೊರೋನಾ ಲಸಿಕೆ ಅಭಿಯಾನವನ್ನು ಪೂರ್ಣಗೊಳಿಸಲು ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಸಮಯದ ಮಿತಿಯನ್ನು ವಿಧಿಸಲಾಗಿಲ್ಲ” ಎಂದಿದ್ದಾರೆ.
ಕೋ-ವಿನ್ ಪೋರ್ಟಲ್ನಲ್ಲಿ ನೋಂದಾಯಿಸಲಾದ ಫಲಾನುಭವಿಗಳ ದತ್ತಾಂಶದ ಪ್ರಕಾರ ಲಸಿಕೆಗಳನ್ನು ವಿತರಿಸಲಾಗುತ್ತಿದೆ ಎಂದಿದ್ದಾರೆ.
ಲಸಿಕೆ ಪಡೆದ ನಂತರ 7,580 ಜನರಲ್ಲಿ ಅಡ್ಡಪರಿಣಾಮ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ ಎಂದು ಹೇಳಿದ್ದಾರೆ.
ಲಸಿಕೆ ಕಾರ್ಯಾಚರಣೆಗಾಗಿ ಕೇಂದ್ರ ಆಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ರೂ 123.49 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.