ಬೆಂಗಳೂರು: ರಾಜ್ಯದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿರುವ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯ ನವದೆಹಲಿಯ ನೋಯ್ಡಾದಲ್ಲಿ ನಡೆಯುತ್ತಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ಅವರು ಇದರ ವೀಕ್ಷಣೆ ನಡೆಸಿದರು.
ಮೊದಲ ಹಂತದಲ್ಲಿ ನಿರ್ಮಾಣವಾಗಲಿರುವ ಪ್ರತಿಮೆಯ ಪ್ರತಿಕೃತಿಯನ್ನು ಥರ್ಮೋಕೋಲ್ನಲ್ಲಿ ನಿರ್ಮಾಣ ಮಾಡುತ್ತಿದ್ದು, ಅಂತರಾಷ್ಟ್ರೀಯ ಮಟ್ಟದ ಕಲಾವಿದ ರಾಮ್ ಸುತಾರ್ ಅವರ ನೇತೃತ್ವದಲ್ಲಿ ಇದರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಥರ್ಮೋಕೋಲ್ ಪ್ರತಿಯ ಮಾದರಿಯನ್ನು ಸ್ವಾಮೀಜಿ ಮತ್ತು ಉಪಮುಖ್ಯಮಂತ್ರಿಗಳು ವೀಕ್ಷಿಸಿದರು. ಥರ್ಮೋಕೋಲ್ ಪ್ರತಿಮೆಯಲ್ಲಿ ಏನಾದರೂ ಬದಲಾವಣೆಗಳಿದ್ದರೆ ಅದನ್ನು ಮಾಡಲಾಗುತ್ತದೆ. ಈ ಪ್ರಕ್ರಿಯೆ ಕೊನೆಯಾದ ಬಳಿಕ ಕಂಚಿತ ಪ್ರತಿಮೆ ನಿರ್ಮಾಣ ಕಾರ್ಯದಲ್ಲಿ ತೊಡಗಲಾಗುತ್ತದೆ.
ಪ್ರತಿಮೆ ವೀಕ್ಷಣೆ ಬಳಿಕ ಮಾತನಾಡಿದ ಡಾ ಅಶ್ವತ್ಥ ನಾರಾಯಣ್, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಬೇಕು ಎಂಬುದು ರಾಜ್ಯದ ಬಯಕೆ, ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಕಳೆದ ವರ್ಷ ಕೆಂಪೇಗೌಡ ಜಯಂತಿಯ ದಿನದಂದೇ ಈ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 23 ಎಕರೆ ಪ್ರದೇಶದಲ್ಲಿ ಈ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.