ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಈ ತಿಂಗಳಲ್ಲಿ ಪರೀಕ್ಷೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.
ಫೆ. 13 ರಿಂದ 16 ರ ವರೆಗೆ ಮುಖ್ಯ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೆ ಪಿಎಸ್ಸಿ ಮಾಹಿತಿ ನೀಡಿದೆ.
ಈ ಪರೀಕ್ಷೆಗಳನ್ನು 1750 ಅಂಕಗಳಿಗೆ ಮುಖ್ಯ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಬಾರಿ ತಲಾ 250 ಅಂಕಗಳ ಎರಡು ಐಚ್ಛಿಕ ವಿಷಯಗಳನ್ನು ಕೈಬಿಡಲಾಗಿದೆ. ಹಾಗಾಗಿ ಈ ಬಾರಿ 1250 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಹಾಗೆಯೇ ನೇರ ಸಂದರ್ಶನವನ್ನು ಈ ವರೆಗೆ 200 ಅಂಕಗಳಿಗೆ ನಡೆಯುತ್ತಿದ್ದು, ಈ ಬಾರಿ 50 ಅಂಕಗಳಿಗೆ ಪರೀಕ್ಷೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.