ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ರಾಜ್ಯದ ಕ್ರೈಸ್ತ ಉದ್ಯಮಿಗಳು, ಶಿಕ್ಷಣ ತಜ್ಞರು ಸೇರಿದಂತೆ ಹಲವರು ಸುಮಾರು ಒಂದು ಕೋಟಿ ರೂ. ಗಳಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಹಲವರು ನಿಧಿ ಸಮರ್ಪಿಸಿದ್ದಾರೆ.
ಈ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಮಾತನಾಡಿದ ಎನ್ಆರ್ಐ ಉದ್ಯಮಿ ರೊನಾಲ್ಡ್ ಕೊಲಾಕೋ, ದೇಶದ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಬೆಂಬಲ ಸದಾ ಇದೆ. ಈ ಹಿಂದೆಯೂ ಇಂತಹ ಹಲವು ವಿಚಾರಗಳಿಗೆ ನಮ್ಮಿಂದಾದ ಅಳಿಲು ಸೇವೆ ಸಲ್ಲಿಸಿದ್ದೇವೆ. ಇದೀಗ ರಾಮ ಮಂದಿರಕ್ಕೂ ನಿಧಿ ಸಮರ್ಪಣೆ ಮಾಡುವ ಮೂಲಕ ಅಳಿಲು ಸೇವೆ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಸಿಇಒಗಳು, ಅನಿವಾಸಿ ಭಾರತೀಯರು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು ಸೇರಿದಂತೆ ಇನ್ನೂ ಹಲವು ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.