ನವದೆಹಲಿ: ರಾಜ್ಯಸಭೆ ಇಂದು 2021 ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿತು. ಇದು 2021 ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಸುಗ್ರೀವಾಜ್ಞೆಯನ್ನು ರಿಪ್ಲೇಸ್ ಮಾಡಲಿದೆ. ಇದು ಭಾರತೀಯ ಆಡಳಿತ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಭಾರತೀಯ ಅರಣ್ಯ ಸೇವೆಯ ಜಮ್ಮು ಮತ್ತು ಕಾಶ್ಮೀರ ಕೇಡರ್ ಅನ್ನು ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ, ಮತ್ತು ಎಜಿಎಂಯುಟಿ ಕೇಡರ್ ಎಂದೂ ಕರೆಯಲ್ಪಡುವ ಯೂನಿಯನ್ ಟೆರಿಟರಿ ಕೇಡರ್ ಜೊತೆ ವಿಲೀನಗೊಳಿಸುತ್ತದೆ .
2019 ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆಗೆ ತಿದ್ದುಪಡಿ ತರಲು ರಾಷ್ಟ್ರಪತಿಗಳು ಕಳೆದ ತಿಂಗಳು ಸುಗ್ರೀವಾಜ್ಞೆಯನ್ನು ಪ್ರಕಟಿಸಿದ್ದರು.
ಚರ್ಚೆಗೆ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ, ಕಳೆದ ಎರಡು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರ ಅಭಿವೃದ್ಧಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಸರ್ಕಾರ ಕ್ರಾಂತಿಕಾರಿ ಮತ್ತು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು.
ಸ್ವಾತಂತ್ರ್ಯದ ನಂತರ, ಮೊದಲ ಬಾರಿಗೆ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಚುನಾವಣೆಗಳನ್ನು ನಡೆಸಲಾಯಿತು, ಅಲ್ಲಿ 98 ಪ್ರತಿಶತ ಮತದಾರರು ಭಾಗವಹಿಸಿದ್ದಾರೆ ಎಂದು ರೆಡ್ಡಿ ಹೇಳಿದರು. ಗ್ರಾಮಗಳ ಅಭಿವೃದ್ಧಿಗೆ ಮನ್ರೇಗಾದಡಿ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದರು.
ಎಲ್ಲಾ ಗೆಜೆಟ್ ಅಧಿಕಾರಿಗಳು ಗ್ರಾಮಸ್ಥರಿಗೆ ಬ್ಯಾಕ್ ಟು ವಿಲೇಜ್ ಕಾರ್ಯಕ್ರಮದಡಿ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಸಚಿವರು ಹೇಳಿದರು. ಡಿಸೆಂಬರ್ 2022 ರೊಳಗೆ ಕಾಶ್ಮೀರವನ್ನು ರೈಲಿನೊಂದಿಗೆ ಸಂಪರ್ಕಿಸಲಾಗುವುದು ಎಂದು ಅವರು ಹೇಳಿದರು. ವಿಶ್ವದ ಅತಿ ಎತ್ತರದ ರೈಲು ಸೇತುವೆ ಚೆನಾಬ್ ಸೇತುವೆ ಮುಂದಿನ ವರ್ಷ ಪೂರ್ಣಗೊಳ್ಳಲಿದೆ ಎಂದು ರೆಡ್ಡಿ ಹೇಳಿದರು. ಜೆ & ಕೆ ನಲ್ಲಿ ಎಲಿವೇಟೆಡ್ ಲೈಟ್ ರೈಲು ವ್ಯವಸ್ಥೆ ನಾಲ್ಕು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.