ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 58 .12 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್ -19 ಲಸಿಕೆಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 36 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ -19 ಚುಚ್ಚುಮದ್ದು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 11 ಸಾವಿರಕ್ಕೂ ಹೆಚ್ಚು ರೋಗಿಗಳ ಒಟ್ಟು ಚೇತರಿಕೆಯೊಂದಿಗೆ ದೇಶದ ಕೋವಿಡ್-19 ಚೇತರಿಕೆ ಪ್ರಮಾಣವು ಶೇಕಡಾ 97.20 ಕ್ಕೆ ತಲುಪಿದೆ. ಈ ಕಾಯಿಲೆಯಿಂದ ಈಗಾಗಲೇ ಒಂದು ಕೋಟಿ ಐದು ಲಕ್ಷ ರೋಗಿಗಳು ಚೇತರಿಸಿಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಪ್ರಸ್ತುತ, ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1. 48 ಲಕ್ಷ ಆಗಿದ್ದು, ಒಟ್ಟು ಸಕಾರಾತ್ಮಕ ಪ್ರಕರಣ ಒಟ್ಟು ಪ್ರಕರಣದ ಕೇವಲ 1.37 ಶೇಕಡಾವ ಮಾತ್ರ ಇದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 11 ಸಾವಿರ 831 ಹೊಸ ಪ್ರಕರಣಗಳು ವರದಿಯಾಗಿವೆ. 84 ಸಾವುಗಳು ಸಂಭವಿಸಿವೆ.
ಕಳೆದ 24 ಗಂಟೆಗಳಲ್ಲಿ ವಿವಿಧ ಪ್ರಯೋಗಾಲಯಗಳು 5. 32 ಲಕ್ಷಕ್ಕೂ ಹೆಚ್ಚು ಕರೋನವೈರಸ್ ಮಾದರಿಗಳನ್ನು ಪರೀಕ್ಷಿಸಿವೆ ಮತ್ತು ಇದುವರೆಗೆ ದೇಶದಲ್ಲಿ 20 ಕೋಟಿ 19 ಲಕ್ಷ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.