ಬೆಂಗಳೂರು: ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಿ ರಾಜ್ಯ ಸರ್ಕಾರ ರಾಜ್ಯ ಪತ್ರವನ್ನು ಹೊರಡಿಸಿದೆ.
ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಕೇಂದ್ರ ಸ್ಥಾನವಾಗಿ ಹೊಸಪೇಟೆಗೆ ಸ್ಥಾನ ನೀಡಲಾಗಿದೆ. ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನ ಹಳ್ಳಿ ತಾಲ್ಲೂಕುಗಳು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲಾಗಿದೆ. ವಿಜಯನಗರವೂ ಸೇರಿದಂತೆ ಈ ತಾಲ್ಲೂಕುಗಳು ಈ ಹಿಂದೆ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟಿದ್ದವು.
ಕುರಗೋಡು, ಬಳ್ಳಾರಿ, ಸಿರಗೊಪ್ಪ,ಕಂಪ್ಲಿ, ಸಂಡೂರು ತಾಲ್ಲೂಕುಗಳು ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿಯೇ ಉಳಿದುಕೊಂಡಿವೆ. ಸದ್ಯ ನೂತನ ಜಿಲ್ಲೆಯಾಗಿ ಅಧಿಕೃತಗೊಂಡಿರುವ ವಿಜಯನಗರ 6 ತಾಲ್ಲೂಕುಗಳನ್ನು ಒಳಗೊಂಡು ಬಳ್ಳಾರಿಗಿಂತ ಗಾತ್ರದಲ್ಲಿ ಹಿರಿದಾಗಿದೆ. 2020 ರ ನವೆಂಬರ್ ತಿಂಗಳಾಂತ್ಯದಲ್ಲಿ ವಿಜಯನಗರವನ್ನು ನೂತನ ಜಿಲ್ಲೆಯಾಗಿ ಘೋಷಿಸುವ ಸಲುವಾಗಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಈ ತೀರ್ಮಾನಕ್ಕೆ ಅಧಿಕೃತ ಮುದ್ರೆ ಬಿದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.