ಬೆಂಗಳೂರು: ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ಸಂಕಷ್ಟದ ಸಂದರ್ಭದಲ್ಲಿಯೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯುಲಾರ್ ಐಸಿಯು ಘಟಕವನ್ನು ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದರು.
ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅತ್ಯಂತ ಕಡಿಮೆ ಅವಧಿಯಲ್ಲಿ ಈ ಘಟಕವನ್ನು ನಿರ್ಮಿಸಲಾಗಿರುವುದು ಶ್ಲಘನೀಯ. ಮುಂದಿನ ದಿನಗಳಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ವತಿಯಿಂದ 50 ಹಾಸಿಗೆಯ ಕ್ಯಾಥ್ ಲ್ಯಾಬ್ ಸ್ಥಾಪನೆ, 150 ಹಾಸಿಗೆಯ ತಾಯಿ – ಮಗು ಚಿಕಿತ್ಸಾ ಕೇಂದ್ರವನ್ನು ಇದೇ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದು ನುಡಿದರು. ಈ ವ್ಯವಸ್ಥೆಗಳಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ಸೇರಿದಂತೆ, ಆಸ್ಪತ್ರೆಯ ಸಿಬ್ಬಂದಿಗಳು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೇವಲ ಮೂರೇ ತಿಂಗಳ ಅವಧಿಯಲ್ಲಿ ಸ್ಥಾಪಿಸಲಾಗಿರುವ 100 ಹಾಸಿಗೆಗಳ ಐಸಿಯು, ದಾನಿಗಳ ನೆರವಿನಿಂದ ಈ ಘಟಕವನ್ನು ನಿರ್ಮಿಸಲಾಗಿದೆ. ಇಂದಿನಿಂದ ತೊಡಗಿದಂತೆ ಈ ಅತ್ಯಾಧುನಿಕ ಮಾಡ್ಯುಲಾರ್ ಐಸಿಯು ಸಾರ್ವಜನಿಕರ ಬಳಕೆಗೂ ಮುಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.