ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದ ಬಜೆಟ್ ಸಹ ಮಂಡನೆಯಾಗಲಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಸಚಿವರು, ಶಾಸಕರು, ಹಲವು ಇಲಾಖೆಗಳು, ಅಧಿಕಾರಿಗಳ ಜೊತೆಗೆ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ.
ಬಜೆಟ್ಗೆ ಸಂಬಂದಿಸಿದಂತೆ ಅವರು ಮುಂದಿನ ಎರಡು ವಾರಗಳ ಕಾಲ ರಾಜ್ಯದ ಎಲ್ಲಾ ಇಲಾಖೆಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಕೊರೋನಾ ನಡುವಿನಲ್ಲಿಯೇ ಈ ಬಾರಿಯ ಬಜೆಟ್ ಮಂಡನೆಯಾಗುತ್ತಿದ್ದು, ಈ ಬಜೆಟಿಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿಯೂ ಹೆಚ್ಚು ಕುತೂಹಲ ಮೂಡಿಸಿರುವುದು ಸುಳ್ಳಲ್ಲ.
ಈ ಬಾರಿ ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿ ಹೆಚ್ಚು ಏರಿಕೆಯಾಗಿಲ್ಲ. ಈ ನಡುವೆ ರಾಜ್ಯದ ಆರ್ಥಿಕತೆ ಉತ್ತೇಜನಕ್ಕೆ ಪೂರಕವಾಗುವಂತೆ ಹೂಡಿಕೆ ಮತ್ತು ಖಾಸಗಿ ಸಹಭಾಗಿತ್ವವನ್ನು ಹೆಚ್ಚು ಆಕರ್ಷಿಸಲು ಅನೇಕ ಕ್ರಮಗಳನ್ನು ಈಗಾಗಲೇ ರಾಜ್ಯ ಸರ್ಕಾರ ಕೈಗೊಂಡಿದೆ. ಜೊತೆಗೆ ಈ ಬಾರಿಯ ಬಜೆಟ್ನಲ್ಲಿಯೂ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಕೃಷಿ, ಆರೋಗ್ಯ, ಮೂಲಭೂತ ಸೌಕರ್ಯಗಳ ಅಗತ್ಯತೆಗಳನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಈ ಬಾರಿಯ ರಾಜ್ಯ ಬಜೆಟಿನಲ್ಲಿ ಯಾವೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಬಹುದು ಎಂಬುದು ಸದ್ಯದ ಪ್ರಶ್ನೆಯೂ ಹೌದು.
ಒಟ್ಟಿನಲ್ಲಿ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಚರ್ಚೆ ನಡೆಸುತ್ತಿದ್ದು, ಯಾವ ರೀತಿಯ ಬಜೆಟ್ ಮಂಡನೆಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.