ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಎಸಿಐ ವರ್ಲ್ಡ್ನ ʼವಾಯ್ಸ್ ಆಫ್ ದಿ ಕಸ್ಟಮರ್ʼ ಎಂಬ ಪುರಸ್ಕಾರಕ್ಕೆ ಪಾತ್ರವಾಗಿದೆ.
ವಿಮಾನ ನಿಲ್ದಾಣವು ಅಲ್ಲಿಗೆ ಭೇಟಿ ನೀಡುವ ಪ್ರಯಾಣಿಕರಿಗೆ ಆದ್ಯತೆ ನೀಡುವುದನ್ನು ಮುಂದುವರೆಸಿದ್ದು, ಕೊರೋನಾ ಸಂದರ್ಭದಲ್ಲಿ ಗ್ರಾಹಕರು ಏರ್ಪೋರ್ಟ್ಗೆ ಭೇಟಿ ನೀಡಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳುತ್ತದೆ. ವಿಮಾನ ನಿಲ್ದಾಣದ ಈ ಉಪಕ್ರಮಕ್ಕೆ ಇದೀಗ ʼದಿ ವಾಯ್ಸ್ ಆಫ್ ದಿ ಕಸ್ಟಮರ್ʼ ಮಾನ್ಯತೆ ದೊರಕಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಉತ್ತಮ ಸೇವೆಗಳನ್ನು ಒದಗಿಸುವ ಮತ್ತು ಅವರಿಗೆ ಸರಿಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನಗಳನ್ನು ನಡೆಸಿದೆ. ಹಾಗೆಯೇ ಕೊರೋನಾ ನಂತರದಲ್ಲಿ ಪ್ರಯಾಣಿಕರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸುವ ಸಲುವಾಗಿ #WeAreHereForYou ಎಂಬ ಉಪಕ್ರಮವನ್ನೂ ಬೆಂಗಳೂರು ವಿಮಾನ ನಿಲ್ದಾಣ ಆರಂಭ ಮಾಡಿತ್ತು.
ಈ ಬಗ್ಗೆ ಮಾತನಾಡಿರುವ ಎಸಿಐ ವರ್ಲ್ಡ್ನ ಡೈರೆಕ್ಟರ್ ಜನರಲ್ ಲೂಯಿಸ್ ಫೆಲಿಪ್ ಡಿ ಒಲಿವೆರಾ, ಎಸಿಐಯ ಏರ್ಪೋರ್ಟ್ ಸರ್ವೀಸ್ ಕ್ವಾಲಿಟಿಯ ಮೂಲಕ ಬೆಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಂದ ಫೀಡ್ಬ್ಯಾಕ್ ಪಡೆದುಕೊಳ್ಳುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನಗಳನ್ನು ನಡೆಸಿತ್ತು. ಇದು ಪ್ರಯಾಣಿಕರನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳುವ ಹಿನ್ನೆಲೆಯಲ್ಲಿಯೂ ಸಕಾರಾತ್ಮಕವಾಗಿ ಕೆಲಸ ಮಾಡಿತ್ತು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.