ನವದೆಹಲಿ: ಸೋಮವಾರ ರಾಜ್ಯಸಭೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರು, ಒಟ್ಟು 9,118 ಮಹಿಳೆಯರು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗಪಡಿಸಿದರು ಮತ್ತು ಇನ್ನೂ 1,700 ಮಹಿಳೆಯರಿಗೆ ಮಿಲಿಟರಿ ಪೊಲೀಸ್ ದಳದ ಜವಾನ್ಗಳಾಗಿ ಸೇನೆ ಸೇರಲು ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.
ಅಧಿಕೃತ ಅಂಕಿಅಂಶಗಳನ್ನು ಉಲ್ಲೇಖಿಸಿದ ಅವರು, 2019 ಕ್ಕೆ ಹೋಲಿಸಿದರೆ 2020 ರಲ್ಲಿ ಸಶಸ್ತ್ರ ಪಡೆಗಳಲ್ಲಿ ಮಹಿಳಾ ಸಿಬ್ಬಂದಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.
ಭಾರತೀಯ ಸೇನೆಯಲ್ಲಿ 12,18,036 ಪುರುಷರು ಮತ್ತು 6,807 ಮಹಿಳೆಯರು, ಭಾರತೀಯ ವಾಯುಪಡೆಯಲ್ಲಿ 1,607 ಮಹಿಳೆಯರು ಮತ್ತು 1,46,727 ಪುರುಷರು, ಮತ್ತು ಭಾರತೀಯ ನೌಕಾಪಡೆಯಲ್ಲಿ 704 ಮಹಿಳಾ ಅಧಿಕಾರಿಗಳು ಇದ್ದಾರೆ ಎಂದಿದ್ದಾರೆ.
ಎಲ್ಲಾ ಮೂರು ಪಡೆಗಳಲ್ಲಿ, ಅತಿ ಹೆಚ್ಚು ಶೇಕಡಾವಾರು ಮಹಿಳಾ ಅಧಿಕಾರಿಗಳು ಭಾರತೀಯ ನೌಕಾಪಡೆಯಲ್ಲಿದ್ದಾರೆ. ಮತ್ತೊಂದೆಡೆ, ಭಾರತೀಯ ಸೇನೆಯಲ್ಲಿ ಅತಿ ಹೆಚ್ಚು ಮಹಿಳೆಯರು ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದು, ಸಿಪಾಯಿಗಳ ಶ್ರೇಣಿಯಲ್ಲಿ ಹೆಣ್ಣುಮಕ್ಕಳನ್ನು ಸೇರಲು ಅವಕಾಶ ನೀಡಿದ ಮೊದಲ ಪಡೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.