ದಾವಣಗೆರೆ: ವಾಲ್ಮಿಕಿ ಸಮುದಾಯಕ್ಕೆ ಎಸ್ಟಿ ಮೀಸಲಾತಿಯನ್ನು 7.5 ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿದ ಸಿಎಂ ಯಡಿಯೂರಪ್ಪ ಅವರು, ಶೀಘ್ರದಲ್ಲೇ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಸಲುವಾಗಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ವೇದಿಕೆಯಲ್ಲಿದ್ದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ಮೀಸಲಾತಿ ಹೆಚ್ಚಳವಾಗದಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಮಠದ ಆವರಣದಲ್ಲೇ ಕೈಗೊಳ್ಳುವುದಾಗಿ ಹೇಳಿದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿರುವ ಭರವಸೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.