ಶಿರಸಿ: ಸಂಸದೀಯ ಮೌಲ್ಯಗಳ ಕುಸಿತವನ್ನು ಕಡಿಮೆ ಮಾಡುವುದಕ್ಕೆ ಪೂರಕವಾಗಿ ಫೆ.24 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಸಭೆಯಲ್ಲಿ ಹಿರಿಯ ಸಂಸದೀಯ ಪಟುಗಳು, ಅನುಭವಿ ರಾಜಕೀಯ ಮುಖಂಡರು, ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಸಂಸದೀಯ ಮೌಲ್ಯಗಳನ್ನು ಉಳಿಸುವ, ಎತ್ತಿ ಹಿಡಿಯುವ ನಿಟ್ಟಿನಲ್ಲಿ ಆ ಮೂಲಕ ಸದನದ ಗೌರವವನ್ನು ಹೆಚ್ಚಿಸುವ ಸಲುವಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಎಂಬಂತೆ ಈ ಸಭೆ ನಡೆಸಲಾಗುತ್ತಿರುವುದಾಗಿ ಕಾಗೇರಿ ಹೇಳಿದ್ದಾರೆ.
ವಿಷಯಗಳ ಚರ್ಚೆಗೆ ಸಂಬಂಧಿಸಿದಂತೆ ಸದನದಲ್ಲಿ ಗಂಭೀರತೆ ಕಡಿಮೆಯಾಗುತ್ತಿದೆ. ರಾಜಕೀಯ ವಿಚಾರಗಳು ಹೆಚ್ಚಿನ ಪ್ರಾಬಲ್ಯ ಪಡೆಯುತ್ತಿವೆ. ಈ ಎಲ್ಲವನ್ನೂ ಸರಿಪಡಿಸುವ ನಿಟ್ಟಿನಲ್ಲಿ ಇಂತಹ ಒಂದು ಸಭೆ ಆಯೋಜಿಸಿರುವುದಾಗಿ ಕಾಗೇರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.