ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಗಳ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಗಳ ಹಾವಳಿ ತಪ್ಪಿಸಲು ಪೊಲೀಸ್ ಇಲಾಖೆ ಬಯೋಮೆಟ್ರಿಕ್ ಪದ್ಧತಿಯನ್ನು ಜಾರಿಗೆ ತಂದಿದೆ.
ನಕಲಿ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಬದಲಿಗೆ ಇನ್ಯಾರೋ ಪರೀಕ್ಷೆ ಬರೆಯುವ ಜಾಲ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸ್ ಇಲಾಖೆ, ನೇಮಕಾತಿಯ ಪ್ರತಿ ಪರೀಕ್ಷೆಯ ಸಂದರ್ಭದಲ್ಲಿಯೂ ಬೆರಳಚ್ಚು ಸಂಗ್ರಹಿಸುವುದಕ್ಕೆ ಪೂರಕವಾಗಿ ನಿಯಮಗಳನ್ನು ರೂಪಿಸಿದೆ. ದಾಖಲಾತಿ ಪರಿಶೀಲನೆ ಕಾರ್ಯ ಕಟ್ಟುನಿಟ್ಟಾಗಿ ಪರಿಶೀಲನೆಯಾಗದ ಹಿನ್ನೆಲೆಯಲ್ಲಿ ಇಂತಹ ನಕಲಿ ಆಟಗಳು ಬಹಿರಂಗವಾಗುತ್ತಿರಲಿಲ್ಲ.
ಇದೀಗ ನ್ಯಾಯಯುತವಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಇಂತಹ ನಕಲಿ ಕಳ್ಳಾಟಗಳ ತಡೆಗೆ ಪೊಲೀಸ್ ನೇಮಕಾತಿಯ ಪ್ರತಿ ಪರೀಕ್ಷೆಯಲ್ಲಿಯೂ ಬೆರಳಚ್ಚು ತಂತ್ರಜ್ಞಾನ ಉಪಯೋಗಿಸಲಾಗುವುದಾಗಿ ಇಲಾಖೆ ತಿಳಿಸಿದೆ. ಜೊತೆಗೆ ಅಭ್ಯರ್ಥಿಯ ನೇಮಕಾತಿ ಆದೇಶ ನೀಡುವ ಸಂದರ್ಭದಲ್ಲಿ ಆತನೇ ಖುದ್ದಾಗಿ ಪರೀಕ್ಷೆಗೆ ಹಾಜರಾಗಿರುವುದಕ್ಕೆ ಸಂಬಂಧಿಸಿದಂತೆ ಇರುವ ವಿಡಿಯೋ ದಾಖಲೆಗಳನ್ನು ಪರಿಶೀಲಿಸಿ ಬಳಿಕವೇ ಆದೇಶದ ಪ್ರತಿ ನೀಡಬೇಕು ಎಂದು ನೇಮಕಾತಿ ವಿಭಾಗದ ಎಜಿಡಿಪಿ ಅಮೃತ್ ಪಾಲ್ ಅವರು ಲಿಖಿತ ಆದೇಶವನ್ನೂ ಹೊರಡಿಸಿದ್ದಾರೆ.
ಶೀಘ್ರದಲ್ಲೇ ಬಯೋಮೆಟ್ರಿಕ್ ಮತ್ತು ಇನ್ನಿತರ ತಾಂತ್ರಿಕ ಅಂಶಗಳ ಖರೀದಿಗೆ ಆದೇಶ ಹೊರಡಿಸಲಾಗುತ್ತದೆ. ಜೊತೆಗೆ ಈಗಾಗಲೇ ಜಾರಿಗೊಳಿಸುವುದಕ್ಕೆ ನಿರ್ಧರಿಸಲಾಗಿರುವ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡುವುದಕ್ಕೆ ಸಂಬಂಧಿಸಿದಂತೆಯೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.