ವಾಷಿಂಗ್ಟನ್: “ಭಾರತವು ಇಂಡೋ-ಪೆಸಿಫಿಕ್ ಪ್ರದೇಶದ ಪ್ರಮುಖ ಪಾಲುದಾರರಲ್ಲಿ ಒಂದಾಗಿದ್ದು, ಅದು ಪ್ರಮುಖ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವುದನ್ನು ನಾವು ಸ್ವಾಗತಿಸುತ್ತೇವೆ”ಎಂದು ಯುನೈಟೆಡ್ ಸ್ಟೇಟ್ಸ್ ಮಂಗಳವಾರ ಹೇಳಿದೆ.
“ಭಾರತವು ಇಂಡೋ-ಪೆಸಿಫಿಕ್ ಪ್ರದೇಶದ ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ. ಭಾರತ ಪ್ರಮುಖ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವುದನ್ನು ನಾವು ಸ್ವಾಗತಿಸುತ್ತೇವೆ ಮತ್ತು ಈ ಪ್ರದೇಶದಲ್ಲಿ ಪ್ರಮುಖ ಭದ್ರತಾ ಪೂರೈಕೆದಾರರಾಗಿ ಅದರ ಪಾತ್ರವನ್ನು ನಾವು ಸ್ವಾಗತಿಸುತ್ತೇವೆ” ಎಂದು ಯುಎಸ್ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
“ರಕ್ಷಣೆ, ಇಂಡೋ-ಪೆಸಿಫಿಕ್ನಲ್ಲಿ ಪ್ರಾದೇಶಿಕ ಸಹಕಾರ, ಭಯೋತ್ಪಾದನೆ ನಿಗ್ರಹ, ಶಾಂತಿಪಾಲನೆ, ಪರಿಸರ, ಆರೋಗ್ಯ, ಶಿಕ್ಷಣ, ತಂತ್ರಜ್ಞಾನ, ಕೃಷಿ, ಬಾಹ್ಯಾಕಾಶ ಮತ್ತು ಸಾಗರಗಳು ಸೇರಿದಂತೆ ವ್ಯಾಪಕವಾದ ರಾಜತಾಂತ್ರಿಕ ಮತ್ತು ಭದ್ರತಾ ವಿಷಯಗಳಲ್ಲಿ ನಾವು ಪರಸ್ಪರ ಸಹಕಾರ ಹೊಂದಿದ್ದೇವೆ “ಎಂದು ಅವರು ಹೇಳಿದ್ದಾರೆ.
ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್ (ಯುಎನ್ಎಸ್ಸಿ) ಯಲ್ಲಿ ಖಾಯಂ ಸದಸ್ಯನಾಗಿರುವ ಭಾರತದ ಅಧಿಕಾರಾವಧಿಯನ್ನು ಅವರು ಸ್ವಾಗತಿಸಿದರು, ಯುಎಸ್ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರರಾಗಿ ಉಳಿದಿದೆ ಮತ್ತು ಒಟ್ಟು ದ್ವಿಪಕ್ಷೀಯ ವ್ಯಾಪಾರವು 2019 ರಲ್ಲಿ 146 ಬಿಲಿಯನ್ ಯುಎಸ್ಡಿಗಳಿಗೆ ಏರಿದೆ ಎಂದಿದ್ದಾರೆ.
ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರ ನಡುವಿನ ಸಂಭಾಷಣೆಯ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.