ಬೆಂಗಳೂರು: ರಾಜ್ಯದಲ್ಲಿ ಮರಳು ಗಣಿಗಾರಿಗೆ ನಿಯಮಗಳನ್ನು ಸರಳಗೊಳಿಸಲಾಗಿದ್ದು, ಮರಳು ಸುಲಭವಾಗಿ ಸಿಗುವಂತೆ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಈ ಸಂಬಂಧ ವಿಕಾಸಸೌಧದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2021 ರ ನೂತನ ಮರಳು ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಪ್ರಸ್ತುತ ಮರಳು ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಹಳ್ಳ, ಕೊಳ್ಳಗಳಿಂದ ಮರಳು ಸಂಗ್ರಹಿಸುವುದಕ್ಕೆ ಅವಕಾಶ ನೀಡಲಾಗುತ್ತದೆ. ಹಾಗೆಯೇ ಟ್ರ್ಯಾಕ್ಟರ್ ಎತ್ತಿನ ಗಾಡಿಯಲ್ಲಿಯೂ ಮರಳು ಸಾಗಾಟಕ್ಕೆ ಅನುಮತಿ ನೀಡುವ ಸಂಬಂಧ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಈ ಹಿಂದೆ ರಾಜ್ಯದಲ್ಲಿ ಇವೆಲ್ಲಕ್ಕೂ ನಿರ್ಬಂಧ ಹೇರಲಾಗಿತ್ತು. ಈ ನಿರ್ಬಂಧವನ್ನು ತೆರವುಗೊಳಿಸಿ ಜನರಿಗೆ ಸುಲಭವಾಗಿ ಮರಳು ದೊರೆಯುವುದಕ್ಕೆ ಪೂರಕವಾದ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಜನಸಾಮಾನ್ಯರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಹೊಸ ಮರಳು ನೀತಿಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು. ಈ ಸಂಬಂಧ ಅಧ್ಯಯನ ನಡೆಸಲು ಮೂರು ಸಮಿತಿಗಳನ್ನು ರಚಿಸಲಾಗಿದ್ದು, ಅವುಗಳ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಿರಾಣಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.