ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ವಿವಿಧ ಸಮುದಾಯಗಳ ಒತ್ತಡ ಹೆಚ್ಚಾಗುತ್ತಿದ್ದು, ಈ ಸಂಬಂಧ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಪಂಚಮಸಾಲಿ, ಕುರುಬ, ಒಕ್ಕಲಿಗ ಮೊದಲಾದ ಸಮುದಾಯಗಳು ಮೀಸಲಾತಿಗಾಗಿ ಪಟ್ಟು ಹಿಡಿದಿದ್ದು, ರಾಜ್ಯ ಸರ್ಕಾರದ ಬಳಿ ತಮ್ಮ ಮನವಿಯನ್ನು ಇರಿಸಿದ್ದಾರೆ. ಈ ಸಮುದಾಯಗಳಿಗೆ ಸಂಬಂಧಿಸಿದ ಸ್ವಾಮೀಜಿಗಳೂ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆನ್ನು ಬಿದ್ದಿದ್ದಾರೆ.
ಈ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಬಿಎಸ್ವೈ, ಈ ಸಂಬಂಧ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಬರುವ ಎಲ್ಲಾ ರೀತಿಯ ಕ್ರಮಗಳನ್ನು ಅನುಕೂಲಗಳನ್ನು ಮಾಡಿಕೊಡುವ ನಿಟ್ಟಿನಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಸಂಬಂಧ ಅಧ್ಯಯನ ನಡೆಸಲು ಹಿಂದುಳಿದ ವರ್ಗಗಳ ಆಯೋಗಕ್ಕೂ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.