ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಚೈತನ್ಯ ತುಂಬುವ, ಅವರಲ್ಲಿ ಶಕ್ತಿ ತುಂಬುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ಮಲ್ಲೇಶ್ವರಂನ ಹವ್ಯಕ ಸಭಾಭವನದಲ್ಲಿ ನಡೆದ ಬಿಜೆಪಿ ಕರ್ನಾಟಕ ಹಿಂದುಳಿದ ವರ್ಗಗಳ ವಿಶೇಷ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ರೈತರಿಗೆ ಸಹಾಯವಾಗಲಿ ಎಂಬ ಆಶಯವನ್ನಿರಿಸಿಕೊಂಡು ನೂತನ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಅಂತಹ ಉತ್ತಮ ಕಾಯ್ದೆಗಳ ಬಗ್ಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಇಂತಹ ವಿಕೃತಿಗಳ ವಿರುದ್ಧ ಎಲ್ಲರೂ ಒಗ್ಗಟ್ಟಾಗಬೇಕಿದೆ. ಕೃಷಿ ಮಸೂದೆಯ ಲಾಭವನ್ನು ಪ್ರತಿಯೊಬ್ಬ ರೈತನೂ ಪಡೆಯುವಂತಾಗಲು, ಈ ಕಾಯ್ದೆಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಮಾಜಿ ಪ್ರಧಾನಿ ದಿ. ವಾಜಪೇಯಿ, ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ ಅವರ ಬಹುಕಾಲದ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತತ್ವದ ಸರ್ಕಾರ ನನಸು ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮೋದಿ ನೇತೃತ್ವದಲ್ಲಿ ಸಶಕ್ತ, ಸಮರ್ಥ ರಾಷ್ಟ್ರ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಬಿಜೆಪಿ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು, ಸಚಿವ ಬೈರತಿ ಬಸವರಾಜ್ ಸೇರಿದಂತೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.