ಬೆಂಗಳೂರು: ರಾಜ್ಯದ ಕೃಷಿ ವಲಯದಲ್ಲಿ ತಾಂತ್ರಿಕತೆ ಮತ್ತು ಆಧುನಿಕತೆಗೆ ಹೆಚ್ಚು ಒತ್ತು ನೀಡುವುದು, ಆ ಮೂಲಕ ಕರ್ನಾಟಕವನ್ನು ʼಅಗ್ರಿ ಸ್ಟಾರ್ಟ್-ಅಪ್ ಹಬ್ʼ ಆಗಿ ಪರಿವರ್ತಿಸುವ ಮಹತ್ವದ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಎಫ್ಐಸಿಸಿ ಶೃಂಗಸಭೆಯಲ್ಲಿ ಭಾಗವಹಿಸಿ ನವೋದ್ಯಮಿಗಳಿಗೆ ವರ್ಚುವಲ್ ಮೂಲಕ ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ಅವರು, ಬೆಂಗಳೂರು ನಗರ ಸ್ಟಾರ್ಟ್-ಅಪ್ ಹಬ್ ಎಂದೇ ಪ್ರಖ್ಯಾತಿ ಪಡೆದಿದೆ. ಆದರೆ ಅಗ್ರಿ ಸ್ಟಾರ್ಟ್-ಅಪ್ಗಳ ಸಂಖ್ಯೆ ಕಡಿಮೆ ಇದ್ದು, ಕೃಷಿಕರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೃಷಿ ಸಂಬಂಧಿತ ಸ್ಟಾರ್ಟ್-ಅಪ್ಗಳ ಆರಂಭಕ್ಕೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಹಾಗೆಯೇ ಬೆಂಗಳೂರನ್ನು ಅಗ್ರಿ ಸ್ಟಾರ್ಟ್-ಅಪ್ ಹಬ್ ಆಗಿ ಪರಿವರ್ತಿಸುವ ಗುರಿಯನ್ನೂ ಸರ್ಕಾರ ಹೊಂದಿದೆ ಎಂದು ಅವರು ನುಡಿದಿದ್ದಾರೆ.
ಸರ್ಕಾರದ ನೀತಿ ನಿಯಮಗಳಿಗೆ ಅನುಗುಣವಾಗಿ ಉದ್ಯಮಗಳು ಪರಿವರ್ತನೆಯಾಗುತ್ತಿವೆ. ಈ ಬದಲಾವಣೆಗೆ ಅನುಗುಣವಾಗಿ ಕೃಷಿ ನವೋದ್ಯಮವನ್ನೂ ಬದಲಾವಣೆ ಮಾಡಲು ಪೂರಕ ಕ್ರಮ ಕೈಗೊಳ್ಳಲಾಗುವುದು. ಕೃಷಿಕರನ್ನು ಕೃಷಿ ಉದ್ಯಮಿಗಳನ್ನಾಗಿಸುವ ನಿಟ್ಟಿನಲ್ಲಿ ಅಗ್ರಿ ಸ್ಟಾರ್ಟ್-ಅಪ್ ಗಳ ಆರಂಭದ ಕುರಿತು ಅಧ್ಯಯನ ನಡೆಸಲು ಸಮಿತಿಯೊಂದನ್ನು ರೂಪಿಸಲಾಗಿದ್ದು, ಈ ಸಮಿತಿ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಅದನ್ನಾಧರಿಸಿ ಮುಂದಿನ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.