ಬೆಂಗಳೂರು: ರಾಜ್ಯ ಸರ್ಕಾರ ನಿರ್ಧರಿಸಿದಂತೆಯೇ ನಡೆದಲ್ಲಿ ಪ್ರತಿವರ್ಷವೂ 1 ನೇ ತರಗತಿಯಿಂದ ತೊಡಗಿದಂತೆ ಜನಪದ ಕಲೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪಠ್ಯಗಳನ್ನು ಸಿದ್ಧಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಜನಪದ ಕಲೆಗಳ ಬಗ್ಗೆ ಯುವಪೀಳಿಗೆ ಹೆಚ್ಚಿನ ಮಾಹಿತಿ ಪಡೆಯುವುದಕ್ಕೆ ಪೂರಕವಾಗುವಂತೆ ಈ ರೀತಿಯ ಕ್ರಮವನ್ನು ಅಳವಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ತಲುಪುವ ನಿಟ್ಟಿನಲ್ಲಿ ಈ ಪ್ರಯತ್ನ ಮಹತ್ವ ಪಡೆಯಲಿದೆ ಎಂದು ಲಿಂಬಾವಳಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಅಭಿವೃದ್ಧಿ ಮಾಡುವ ಬಗೆ, ನಗರಗಳಲ್ಲಿ ವಾಸಿಸುತ್ತಿರುವವರಿಗೆ ಗ್ರಾಮೀಣ ಬದುಕಿನ ಸೊಗಡನ್ನು ಅರಿವಾಗಿಸುವ ನಿಟ್ಟಿನಲ್ಲಿಯೂ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಜೊತೆಗೆ ಈಗಾಗಲೇ ವಿವಿಧ ಅಕಾಡೆಮಿಗಳ ವತಿಯಿಂದ ನೀಡಲಾಗುತ್ತಿರುವ ಪ್ರಶಸ್ತಿಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿಯೂ ಅವರು ವಿವಿಧ ಅಕಾಡೆಮಿ ಮತ್ತು ರಂಗಾಯಣದ ಅಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.