ಬೆಂಗಳೂರು: ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎನ್ಎಎಸಿ ಪ್ರಕಟಿಸಿರುವ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ನಿರ್ವಹಣಾ ವ್ಯವಸ್ಥೆ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನೀಡಬೇಕಾದ ಶಿಕ್ಷಣದ ಬಗ್ಗೆ ಹಲವು ನಿಯಮಗಳಿರುತ್ತವೆ. ಆದರೆ, ಅದರ ಪಾಲನೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇದೀಗ ನಮ್ಮ ದೇಶ, ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ವಿದ್ಯಾರ್ಥಿಯೊಬ್ಬನ ಸ್ವಾಭಾವಿಕ ಸೃಜನಶೀಲತೆಗೆ ಅವಕಾಶಗಳು ದೊರೆಯುವಂತೆ ಉನ್ನತ ಶಿಕ್ಷಣದ ನಿಯಮಗಳನ್ನು ರಚಿಸುವತ್ತ ಚಿತ್ತ ಹರಿಸಬೇಕಿದೆ. ಭಾರತದ ಉನ್ನತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಪುಸ್ತಕ ಮಹತ್ವ ಪಡೆಯಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.