ಬೆಂಗಳೂರು: ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಆರೋಗ್ಯ ಸಂಬಂಧಿತ ತುರ್ತು ಪರಿಸ್ಥಿತಿ ಎದುರಾದಾಗ ನೆರವು ಪಡೆದುಕೊಳುವುದಕ್ಕೆ ಅನುಕೂಲವಾಗುವಂತೆ ರಾಜ್ಯ ಶಿಕ್ಷಣ ಇಲಾಖೆ ಫಾಸ್ಟ್ (ಫಸ್ಟ್ ಏಡ್ ಫಾರ್ ಸ್ಟುಡೆಂಟ್ ಆಂಡ್ ಟೀಚರ್ಸ್) ಎಂಬ App ಒಂದನ್ನು ಬಿಡಗಡೆ ಮಾಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ರೆಡ್ ಕ್ರಾಸ್ಗಳು ಈ App ಅನ್ನು ಅಭಿವೃದ್ಧಿ ಮಾಡಿವೆ. ಈ App ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪೋಷಕರು ಇದನ್ನು ಡೌನ್ಲೋಡ್ ಮಾಡುವಂತೆಯೂ ಇಲಾಖೆ ಸೂಚಿಸಿದೆ.
ಶಾಲೆಯಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾದಲ್ಲಿ, ವಿದ್ಯಾರ್ಥಿಗಳಿಗೆ ಅವಘಡಗಳು, ಗಂಭೀರ ಗಾಯಗಳಾದ ಸಂದರ್ಭದಲ್ಲಿ ಸೇರಿದಂತೆ ಇನ್ನಿತರ ತುರ್ತು ಸಂದರ್ಭಗಳಲ್ಲಿ ವೈದ್ಯರು ಆಗಮಿಸುವ ಮೊದಲೇ ಪ್ರಾಥಮಿಕ ಚಿಕಿತ್ಸೆಯನ್ನು ಒದಗಿಸಲು ಈ App ಸಹಾಯ ಮಾಡಲಿದೆ. ಶಾಲೆಗಳಲ್ಲಿ ಸದ್ಯ ಫಸ್ಟ್ ಏಡ್ ಎಂದರೆ ಕೇವಲ ಟಿಂಚರ್, ಬ್ಯಾಂಡೇಡ್ಗಳು ಮಾತ್ರವೇ ಸಿಗುತ್ತಿವೆ. ಅದಕ್ಕಿಂತ ಭಿನ್ನವಾದ ಯಾವುದೇ ಸಮಸ್ಯೆಗೆ ಪ್ರಾಥಮಿಕ ಚಿಕಿತ್ಸೆ ನೀಡುವುದು ಅಸಾಧ್ಯವಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಈ App ಅನ್ನು ಅಭಿವೃದ್ಧಿ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.